ಶಿಕ್ಷಣ

ಬ್ರಹ್ಮಾವರ: ಫಾರ್ಚೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ ‘ಫ್ರೆಶರ್ಸ್ ಡೇ’ ಜೈನಿಕಾ-2026

Views: 0

ಕನ್ನಡ ಕರಾವಳಿ ಸುದ್ದಿ: ಬ್ರಹ್ಮಾವರ ಮಾಬುಕಳದ ಫಾರ್ಚೂನ್ ಅಕಾಡೆಮಿ ಮತ್ತು ಚಾರಿಟೇಬಲ್ ಟ್ರಸ್ಟ್ ಪ್ರವರ್ತಿತ ಫಾರ್ಚೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ ಕಾಲೇಜಿನಲ್ಲಿ ಫ್ರೆಶರ್ಸ್ ಡೇ ಜೈನಿಕಾ-2026 ನವೆಂಬರ್ 17ರಂದು ಉದ್ಘಾಟನೆಯೊಂದಿಗೆ ಕಾರ್ಯಕ್ರಮ ನಡೆಯಿತು.

ಫಾರ್ಚೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ ಕಾಲೇಜಿಗೆ ನೂತನವಾಗಿ ಸೇರ್ಪಡೆಗೊಂಡ ಜಿಎನ್ಎಂ ನರ್ಸಿಂಗ್, ಪ್ಯಾರಾ ಮೆಡಿಕಲ್, ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಲು ಎರಡನೇ ವರ್ಷದ ವಿದ್ಯಾರ್ಥಿಗಳಿಂದ ಪರಿಚಯಿಸುವ ಮತ್ತು ಹಿರಿಯ ಕಿರಿಯ ವಿದ್ಯಾರ್ಥಿಗಳ ನಡುವೆ ಬಾಂಧವ್ಯ ಬೆಸೆಯುವ ಜೈನಿಕಾ-2026 ಕಾರ್ಯಕ್ರಮವನ್ನು ಫಾರ್ಚೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ ಇದರ ಚೇರ್ಮನ್ ಡಾ.ತಾರನಾಥ್ ಶೆಟ್ಟಿ ಸಭೆಯ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಕಾಲೇಜಿಗೆ ನೂತನವಾಗಿ ಸೇರ್ಪಡೆಯಾಗಿರುವ ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಸ್ವಾಗತಿಸುತ್ತಾ, ಜೀವನದ ಅತ್ಯಂತ ಸುಂದರ ಮತ್ತು ಸ್ಮರಣೀಯ ಪ್ರಯಾಣದ ಮೊದಲ ಹೆಜ್ಜೆಯಾಗಿದ್ದು, ವಿದ್ಯಾರ್ಥಿಗಳು ಉತ್ತಮ ಸಂಸ್ಕೃತಿ ಹೊಂದಿ ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲೆ ಪ್ರೊ. ಸ್ಮಿತಾ ಮೋಲ್ ಇ.ಎಂ ವಿದ್ಯಾರ್ಥಿಗಳನ್ನು ಸ್ವಾಗತಿಸಿ ಮಾತನಾಡಿದ ಅವರು, ಕಾಲೇಜಿನಲ್ಲಿ ಕೇವಲ ಪಠ್ಯ ವಸ್ತುಗಳ ಜ್ಞಾನಕ್ಕೆ ಮಾತ್ರ ಸೀಮಿತವಲ್ಲ ನಮ್ಮಲ್ಲಿರುವ ಪ್ರತಿಭೆ ಸೃಜನಶೀಲತೆ ಮತ್ತು ನಾಯಕತ್ವ ಗುಣಗಳನ್ನು ಹೊಂದಿರುವ ಮತ್ತು ಸಮಾಜದಲ್ಲಿ ಜವಾಬ್ದಾರಿಯುತ ನಾಯಕರನ್ನಾಗಿ ರೂಪಿಸುವ ಉತ್ತಮ ವೇದಿಕೆಯಾಗಿದೆ ಎಂದರು.

ಕಾರ್ಯಕ್ರಮ ಸಂಯೋಜಕ ಉಪನ್ಯಾಸಕಿಯರಾದ ಪ್ರೀತಿಕಾ, ಪ್ರಜ್ಞಾ, ನಯನಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಹಾಲಕ್ಷ್ಮೀ, ದೀಪಿಕಾ, ಶಶಿಕಲಾ ಪ್ರಾರ್ಥಿಸಿದರು.

ಎರಡನೇ ವರ್ಷದ ಜಿಎನ್ಎಂ ವಿದ್ಯಾರ್ಥಿನಿ ಪ್ರಸ್ತಿತಿ ಸ್ವಾಗತಿಸಿದರು. ಎರಡನೇ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ರಿಯಾಜುಲಿಯಾ ಕಾರ್ಯಕ್ರಮ ನಿರ್ವಹಿಸಿದರು. ಎರಡನೇ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ಯಜ್ಞಶ್ರೀ ವಂದಿಸಿದರು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಕ್ರೀಡಾ ಮತ್ತು ವಿವಿಧ ಸಾಂಸ್ಕೃತಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.

ಪ್ರಥಮ ಜಿಎನ್ಎಂ ವಿದ್ಯಾರ್ಥಿನಿ ಅಂಜು, ಎರಡನೇ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ಅಂಕಿತ ಕಾರ್ಯಕ್ರಮ ಸಂಯೋಜಿಸಿದರು.

Related Articles

Back to top button
error: Content is protected !!