ರಾಜಕೀಯ
ಉದ್ಯೋಗ ಖಾತ್ರಿ ಯೋಜನೆಯಡಿ ಹಣ ದುರುಪಯೋಗ: ಗ್ರಾಮ ಪಂಚಾಯತ್ ಅಧ್ಯಕ್ಷನಿಗೆ ಜೈಲು
Views: 58
ಕನ್ನಡ ಕರಾವಳಿ ಸುದ್ದಿ: ಯಾದಗಿರಿ ಸುರಪುರ ತಾಲೂಕಿನ ಹೇಮನೂರು ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿ ನಡೆಸದೆ, ದಾಖಲೆ ನಿರ್ವಹಿಸದೆ ಸರಕಾರದ 13.57 ಲಕ್ಷ ರೂ.ದುರುಪಯೋಗಪಡಿಸಿಕೊಂಡ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ.
ಪ್ರಕರಣದ ವಿಚಾರಣೆ ನಡೆಸಿದ ಯಾದಗಿರಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮರುಳಸಿದ್ದಾರಾಧ್ಯ ತೀರ್ಪು ಪ್ರಕಟಿಸಿದ್ದಾರೆ.
ಗ್ರಾಮ ಪಂಚಾಯಿತಿ ಅಧ್ಯಕ್ಷ ದೇವನಗೌಡ ನಿಡುಗುಂದಿ ಅವರಿಗೆ 20 ಸಾವಿರ ರೂ.ದಂಡ ಹಾಗೂ 3 ವರ್ಷ ಜೈಲು ಶಿಕ್ಷೆ, ಸಿದ್ದಪ್ಪಗೆ 2 ಸಾವಿರ ರು. ದಂಡ ಹಾಗೂ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದ್ದಾರೆ.






