ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಸುಜ್ಞಾನ ಪದವಿ ಪೂರ್ವ ಕಾಲೇಜು- ವಾರ್ಷಿಕ ಕ್ರೀಡಾಕೂಟ
Views: 17
ಕನ್ನಡ ಕರಾವಳಿ ಸುದ್ದಿ: ಸುಜ್ಞಾನ ಎಜುಕೇಶನ್ ಟ್ರಸ್ಟ್ ಪ್ರವರ್ತಿತ ಯಡಾಡಿ- ಮತ್ಯಾಡಿಯ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಸುಜ್ಞಾನ ಪದವಿಪೂರ್ವ ಕಾಲೇಜು, ವಿದ್ಯಾರಣ್ಯ ಗ್ಲೋಬಲ್ ಸ್ಕೂಲ್ ಆಶ್ರಯದಲ್ಲಿ ನವೆಂಬರ್ 19ರಂದು ವಾರ್ಷಿಕ ಕ್ರೀಡಾಕೂಟ ನಡೆಯಿತು.
ಅಮಾಸೆಬೈಲು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಸದೃಢವಾದ ದೇಹದಲ್ಲಿ ಸದೃಢ ಮನಸ್ಸಿರುತ್ತದೆ. ಕ್ರೀಡೆಯು ಕೇವಲ ದೈಹಿಕ ಚಟುವಟಿಕೆಗಳಿಗೆ ಮಾತ್ರ ಸೀಮಿತವಲ್ಲ ಅದು ನಮ್ಮ ಶಿಸ್ತು ಏಕಾಗ್ರತೆ, ನಾಯಕತ್ವ ಗುಣ ಮತ್ತು ತಂಡದ ಮನೋಭಾವ ಬೆಳೆಸುತ್ತದೆ ಎಂದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಇದರ ಅಧ್ಯಕ್ಷರಾದ ಡಾ.ರಮೇಶ್ ಶೆಟ್ಟಿ ಮಾತನಾಡಿ, ನಾವು ಯಾವುದೇ ಕಾರ್ಯಕ್ರಮ ನಡೆಸುವಾಗ ವಿದ್ಯಾರ್ಥಿಗಳಿಗೆ ಮಾದರಿಯಾಗುವ ವ್ಯಕ್ತಿಗಳನ್ನೇ ಆಯ್ಕೆ ಮಾಡುತ್ತೇವೆ. ಕ್ರೀಡೆಯಲ್ಲಿ ಸೋಲು ಮತ್ತು ಗೆಲವು ಎರಡು ಸಹಜ. ಗೆದ್ದವ ಹಿಗ್ಗದೆ ಸೋತಾಗ ಕುಗ್ಗದೆ ಎರಡನ್ನೂ ಸಮಾನವಾಗಿ ಸ್ವೀಕರಿಸಿ, ಕ್ರೀಡಾ ಸ್ಪೂರ್ತಿ ಬೆಳೆಸಿಕೊಳ್ಳಬೇಕು. ಕ್ರೀಡೆಯ ಮೂಲಕ ಶಿಸ್ತು, ಆತ್ಮವಿಶ್ವಾಸ, ನಾಯಕತ್ವ ಬೆಳೆಸುವ ಉತ್ತಮ ವೇದಿಕೆ ಇದಾಗಿದೆ ಎಂದರು.
ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಖಜಾಂಚಿ ಭರತ್ ಶೆಟ್ಟಿ ಮಾತನಾಡಿ, ಸಾಧನೆ ನಿಂತ ನೀರಲ್ಲ ನಿರಂತರವಾಗಿರಬೇಕು. ಪಠ್ಯದ ಜೊತೆಗೆ ವಿದ್ಯಾರ್ಥಿಗಳು ಕ್ರೀಡೆಯ ಮೂಲಕ ಶಿಸ್ತು, ಪರಸ್ಪರ ಸಹಕಾರ ಬೆಳೆಸಿಕೊಳ್ಳಿ ಎಂದರು.
ಕ್ರೀಡೋತ್ಸವದ ಆಕರ್ಷಕ ಪಥ ಸಂಚಲನೆಯಲ್ಲಿ ಠಾಣಾಧಿಕಾರಿ ಸುಧಾರಾಣಿ ಗೌರವ ಸ್ವೀಕರಿಸಿದರು.
ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ ಧ್ವಜಾರೋಹಣಗೈದರು. ಇದೇ ಸಂದರ್ಭದಲ್ಲಿ ಬಲೂನ್ ಹಾರಿಸಿ ಬಿಡುವುದರ ಮೂಲಕ ಕ್ರೀಡೋತ್ಸವಕ್ಕೆ ಚಾಲನೆ ನೀಡಲಾಯಿತು.
ರಾಷ್ಟ್ರೀಯ ಕ್ರೀಡಾಪಟು ಲಾಸ್ಯ ಮದ್ಯಸ್ತ ಕ್ರೀಡಾ ಜ್ಯೋತಿಯನ್ನು ತಂದು ಸುಧಾರಾಣಿ ಅವರಿಗೆ ಹಸ್ತಾಂತರಿಸಿ ಕ್ರೀಡಾ ಜ್ಯೋತಿ ಬೆಳಗಿಸಲಾಯಿತು.
ವೇದಿಕೆಯಲ್ಲಿ ವಿದ್ಯಾರಣ್ಯ ಗ್ಲೋಬಲ್ ಶಾಲೆಯ ಪ್ರಾಂಶುಪಾಲೆ ಅನಿತಾ ಕುಮಾರಿ ಉಪ ಪ್ರಾಂಶುಪಾಲೆ ಸ್ಪೂರ್ತಿ, ದೈಹಿಕ ಶಿಕ್ಷಣ ಶಿಕ್ಷಕರಾದ ಸುರೇಶ್ ಶೆಟ್ಟಿ, ಸತೀಶ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ಸುಜ್ಞಾನ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರಂಜನ್ ಶೆಟ್ಟಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಚಿತ್ರಪಾಡಿ ಸತೀಶ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಪ್ರದೀಪ್ ಕೆ ವಂದಿಸಿದರು.















