ಬೈಂದೂರಿನ ಯುವತಿ ಉಡುಪಿ ಬಸ್ ನಿಲ್ದಾಣದಿಂದ ನಾಪತ್ತೆ
Views: 570
ಕನ್ನಡ ಕರಾವಳಿ ಸುದ್ದಿ: ಬೈಂದೂರು ತಾಲೂಕು ಹೇರೂರು ಗ್ರಾಮದ ರಾಗಿಹಕ್ಲು ಗದ್ದೆಮನೆ ನಿವಾಸಿ ಸುಮಿತ್ರಾ (26) ಎಂಬ ಯುವತಿ ನಾಪತ್ತೆಯಾಗಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಮಾಹಿತಿ ನೀಡಲಾಗಿದೆ.
ಸುಮಿತ್ರಾ ಅವರು ನವೆಂಬರ್ 13ರಂದು ಬೆಳಗ್ಗೆ 10 ಗಂಟೆಯಿಂದ ಉಡುಪಿ ಬನ್ನಂಜೆಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಕಾಣೆಯಾಗಿದ್ದಾರೆ. ಈವರೆಗೆ ಅವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗದ ಹಿನ್ನೆಲೆಯಲ್ಲಿ ಪೊಲೀಸರು ಸಾರ್ವಜನಿಕರ ಸಹಕಾರ ಕೋರಿದ್ದಾರೆ.
ನಾಪತ್ತೆಯಾಗಿರುವ ಯುವತಿ ಸುಮಾರು 5 ಅಡಿ 1 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ ಹಾಗೂ ಕೋಲು ಮುಖ ಹೊಂದಿದ್ದು, ಕನ್ನಡ, ತುಳು ಮತ್ತು ಹಿಂದಿ ಭಾಷೆ ಮಾತನಾಡುತ್ತಾರೆ.
ಯುವತಿಯ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆ (0820-2520444), ಉಡುಪಿ ಪೊಲೀಸ್ ಕಂಟ್ರೋಲ್ ರೂಂ (0820-2526444), ಪೊಲೀಸ್ ನಿರೀಕ್ಷಕರು (9480805408) ಅಥವಾ ಪೊಲೀಸ್ ಉಪನಿರೀಕ್ಷಕರು (9080805445) ಅವರನ್ನು ಸಂಪರ್ಕಿಸುವಂತೆ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.






