ಕೆದೂರು ಗ್ರಾಮ ಪಂಚಾಯತ್: ಅಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ ಉಳ್ತೂರು, ಉಪಾಧ್ಯಕ್ಷರಾಗಿ ಜ್ಯೋತಿ ದೇವಾಡಿಗ ಆಯ್ಕೆ

Views: 0
ಕೆದೂರು ಗ್ರಾಮ ಪಂಚಾಯತ್: ಅಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ ಉಳ್ತೂರು, ಉಪಾಧ್ಯಕ್ಷರಾಗಿ ಜ್ಯೋತಿ ದೇವಾಡಿಗ ಆಯ್ಕೆ
ಒಟ್ಟು ಹತ್ತು ಜನ ಸದಸ್ಯರ ಬೆಂಬಲದೊಂದಿಗೆ ಬಿಜೆಪಿ, ಕಾಂಗ್ರೆಸ್ ಸಮಬಲದ ಬಲಾಬಲ ಹೊಂದಿದ್ದು, ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.
ಅರಣ್ಯಾಧಿಕಾರಿ ಕಿರಣ್ ಬಾಬು ಅವರು ಚುನಾವಣಾ ಅಧಿಕಾರಿಯಾಗಿ ಚುನಾವಣಾ ಪ್ರಕ್ರಿಯೆ ನಡೆಸಿದರು.
ಈ ಸಂದರ್ಭದಲ್ಲಿ ಪಂಚಾಯತ್ ಸರ್ವ ಸದಸ್ಯರು ಉಪಸ್ಥಿತರಿದ್ದರು.

ಕೆದೂರು ಗ್ರಾಮ ಪಂಚಾಯತ್, ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅಭಿನಂದನಾ ಸಮಾರಂಭವು ಕೆದೂರು ಪ್ರೌಢಶಾಲಾ ಸಭಾಂಗಣದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ, ಕೆದೂರು ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಸಂಪತ್ ಕುಮಾರ್ ಶೆಟ್ಟಿ ಶಾನಾಡಿ, ಬಿ.ಜೆ.ಪಿ. ಮಂಡಲ ಅಧ್ಯಕ್ಷರಾದ ಶಂಕರ್ ಅಂಕದಕಟ್ಟೆ, ಗೋಪಾಡಿ ಪಂಚಾಯತ್ ಅಧ್ಯಕ್ಷರಾದ ಸುರೇಶ ಶೆಟ್ಟಿ ಗೋಪಾಡಿ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ ಪೂಜಾರಿ ವಕ್ವಾಡಿ, ಕೆದೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶರತ್ ಕುಮಾರ್ ಹೆಗ್ಡೆ ಶಾನಾಡಿ, ಕೋಟೇಶ್ವರ ವ್ಯ, ಸೇ.ಸ, ಸಂಘದ ನಿರ್ದೇಶಕರಾದ ನವೀನ ಹೆಗ್ಡೆ ಶಾನಾಡಿ, ಕೆದೂರು ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಕೆ.ಭುಜಂಗ ಶೆಟ್ಟಿ, ವಸಂತ ಶೆಟ್ಟಿ ಕೆದೂರು, ಮಾಜಿ ಎ.ಪಿ.ಎಂ.ಸಿ ನಿರ್ದೇಶಕರು ರತ್ನಾಕರ ಶೆಟ್ಟಿ ಕೆದೂರು, ಕುಶಲ ಶೆಟ್ಟಿ, ದೀಪ ಪ್ರವೀಣ್ ಶೆಟ್ಟಿ ಕೆದೂರು, ಕರುಣಾಕರ ಶೆಟ್ಟಿ ಕೆದೂರು, ಮಹಾಬಲ ಶೆಟ್ಟಿ, ನೂತನ ಅಧ್ಯಕ್ಷರಾದ ಪ್ರಶಾಂತ್ ಶೆಟ್ಟಿ ಉಳ್ತೂರು, ಉಪಾಧ್ಯಕ್ಷೆ ಜ್ಯೋತಿ ದೇವಾಡಿಗ, ಹಾಗೂ ಊರ, ಪರಊರ ಗ್ರಾಮಸ್ಥರು, ಅಭಿಮಾನಿಗಳು, ಹಿತೈಷಿಗಳು ಉಪಸ್ಥಿತರಿದ್ದರು.

ಹಾಜರಿದ್ದ ಎಲ್ಲರೂ ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಿ, ಶುಭ ಹಾರೈಸಿದರು, ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರಾದ ಪ್ರಶಾಂತ್ ಶೆಟ್ಟಿ ಉಳ್ತೂರು ಮಾತನಾಡಿ, ನನ್ನ ಅಧಿಕಾರವಧಿಯಲ್ಲಿ ಎಲ್ಲರ ಸಹಕಾರದೊಂದಿಗೆ, ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು, ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತನ್ನು ನೀಡುವ ಮೂಲಕ ಜನರ ಆಶೂತ್ತರಗಳಿಗೆ ಸ್ಪಂದಿಸಿ, ಅನುದಾನಗಳನ್ನು ಸಮರ್ಪಕವಾಗಿ ಬಳಸಿಕೊಂಡು, ಪಂಚಾಯತ್ ನ್ನು ಅಭಿವೃದ್ಧಿ ಪಥದತ್ತ ಕೊಂಡೋಯ್ಯುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇನೆ ಎಂದರು. ಪ್ರತಾಪ್ ಶೆಟ್ಟಿ ಉಳ್ತೂರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.






