ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ವಕ್ವಾಡಿಯಲ್ಲಿ “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮ
Views: 2
ಕನ್ನಡ ಕರಾವಳಿ ಸುದ್ದಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇವರ ವತಿಯಿಂದ ವಕ್ವಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ನವೆಂಬರ್ 19ರಂದು ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮ ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಸುಬ್ರಹ್ಮಣ್ಯ ಶೆಟ್ಟಿ ಅವರು ಮಕ್ಕಳ ಮುಂದಿನ ಉಜ್ವಲ ಭವಿಷ್ಯದ ಬಗ್ಗೆ ಮಾತನಾಡುತ್ತಾ, ಆರೋಗ್ಯಪೂರ್ಣ ಸಮಾಜ ನಿರ್ಮಾಣ ನಮ್ಮೆಲ್ಲರ ಹೊಣೆ. ಬಹುತೇಕ ಯುವಜನತೆ ಬಾಹ್ಯ ವ್ಯಕ್ತಿಗಳ ಪ್ರಭಾವದಿಂದ ದುಶ್ಚಟಗಳಿಗೆ ದಾಸರಾಗುತ್ತಿದ್ದು, ಈ ದಿಶೆಯಲ್ಲಿ ತಂದೆ-ತಾಯಿ ಹಾಗೂ ಗುರುಗಳು ಹೇಳಿದ ಮಾತುಗಳನ್ನು ವಿದ್ಯಾರ್ಥಿಗಳು ಪಾಲಿಸಬೇಕು. ಸಮಾಜದಲ್ಲಿ ಗೌರವ ವ್ಯಕ್ತಿಗಳಾಗಿ ಗುರುತಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಲ್ಲಿ ಸದೃಢ ಆರೋಗ್ಯ, ಉತ್ತಮ ಹವ್ಯಾಸಗಳು ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವುದು.ಸ್ವಸ್ಥ ಸಮಾಜ ರೂಪಿಸುವಲ್ಲಿ ಯುವಜನತೆಯ ಪಾತ್ರ ಮಹತ್ವದದ್ದಾಗಿದೆ ಎಂದರು.
ಪ್ರಭಾರ ಮುಖ್ಯೋಪಾಧ್ಯಾಯರಾದ ಶೈಲ ಸಭೆಯ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಕುಸುಮಾಕರ ಶೆಟ್ಟಿ,ಎಸ್ ಡಿಎಂಸಿ ಸದಸ್ಯರಾದ ಸವಿತಾ, ಪ್ರೇಮ, ಹಾಗೂ ಪೂರ್ಣಿಮ ಉಪಸ್ಥಿತರಿದ್ದರು.
ಮೇಲ್ವಿಚಾರಕರಾದ ದಿವಾಕರ್ ಸ್ವಾಗತಿಸಿದರು. ಸುರೇಶ್ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಕ ಕುಸುಮಾಕರ ವಂದಿಸಿದರು.








