ಸಾಂಸ್ಕೃತಿಕ

ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ ಅಧ್ಯಕ್ಷರಾಗಿ ಡಾ.ಗಣೇಶ್ ಗಂಗೊಳ್ಳಿ ಆಯ್ಕೆ 

Views: 0

ಕುಂದಾಪುರ: ಕನ್ನಡ ಜಾನಪದ ಪರಿಷತ್ ಇದರ ಉಡುಪಿ ಜಿಲ್ಲಾ ಅಧ್ಯಕ್ಷರನ್ನಾಗಿ ಖ್ಯಾತ ಗಾಯಕ ಹಾಗೂ ಸಂಘಟಕರು ಆದ ಡಾ.ಗಣೇಶ್ ಗಂಗೊಳ್ಳಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಡಾ.ಎಸ್ ಬಾಲಾಜಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಳೆದ 33 ವರ್ಷಗಳಿಂದ ಜಾನಪದ, ಸಂಗೀತ ಕ್ಷೇತ್ರದಲ್ಲಿ ಸೇವೆಸಲ್ಲಿಸಿದ್ದ ಅವರು ಹಲವಾರು ಸಂಘ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ್ದಾರೆ.

ಕರ್ನಾಟಕ ಜಾನಪದ ಭೂಷಣ ರಾಜ್ಯ ಪ್ರಶಸ್ತಿ , ಪಂಡಿತ್ ಪಂಚಾಕ್ಷರಿ ಗವಾಯಿಗಳ ರಾಷ್ಟ್ರೀಯ ಪ್ರಶಸ್ತಿ- 2020 ಹಾಗೂ ಸಾವಿರಾರು ಸಂಗೀತ ಕಾರ್ಯಕ್ರಮಗಳನ್ನು ನಾಡಿನಾದ್ಯಂತ ನೀಡಿದ ಇವರನ್ನು ಅರ್ಹವಾಗಿ ಈ ಹುದ್ದೆಗೆ ಆಯ್ಕೆ ಮಾಡಲಾಗಿದೆ.

Related Articles

Back to top button
error: Content is protected !!