ಇತರೆ

ಕೋಟೇಶ್ವರದಲ್ಲಿ ಭೀಕರ ಅಪಘಾತ: ಮದುವೆಯ ಸಂಭ್ರಮದಲ್ಲಿ ಭಾಗವಹಿಸಲು ಬಂದಿದ್ದ ಯುವಕ ಸಾವು 

Views: 167

ಕನ್ನಡ ಕರಾವಳಿ ಸುದ್ದಿ: ಕೋಟೇಶ್ವರದ ಸಮೀಪ ಕಟ್ಕೇರಿ ಹರಕೆ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕ ಮೃತಪಟ್ಟಿರುವ ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಹುಂಚಾ ಗ್ರಾಮದ ಹರ್ಷ ಮೃತಪಟ್ಟ ಯುವಕ

ಕುಟುಂಬದವರ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೋಟೇಶ್ವರಕ್ಕೆ ಆಗಮಿಸಿದ್ದ ಹರ್ಷ, ಮದುವೆ ಕಾರ್ಯಕ್ರಮ ಮುಗಿದ ಬಳಿಕ ಇತರ ಯುವಕರೊಂದಿಗೆ ಎರಡು ಬೈಕ್‌ಗಳಲ್ಲಿ ತೆರಳುತ್ತಿದ್ದ ವೇಳೆ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ಅಪಘಾತದ ಡಿಕ್ಕಿಯ ತೀವ್ರತೆಗೆ ಹರ್ಷ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮದುವೆಯ ಸಂಭ್ರಮದಲ್ಲಿ ಭಾಗವಹಿಸಲು ಬಂದಿದ್ದ ಯುವಕ ದುರಂತವಾಗಿ ಸಾವನ್ನಪ್ಪಿರುವುದು ಕುಟುಂಬಸ್ಥರು, ಬಂಧುಗಳು ಹಾಗೂ ಸ್ನೇಹಿತರಲ್ಲಿ ತೀವ್ರ ಶೋಕವನ್ನುಂಟುಮಾಡಿದೆ.

Related Articles

Back to top button
error: Content is protected !!