ಜನಮನ

ಕುಂದಾಪುರ: ಅಂತರಾಷ್ಟ್ರೀಯ ಬಾಲ್ಯವಿವಾಹ ವಿರೋಧಿ ದಿನಾಚರಣೆ 

Views: 39

ಕನ್ನಡ ಕರಾವಳಿ ಸುದ್ದಿ: ಅಂತರಾಷ್ಟ್ರೀಯ ಬಾಲ್ಯ ವಿವಾಹ ವಿರೋಧಿ ದಿನ ಈ ದಿನವನ್ನು ಕುಂದಾಪುರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹೆಣ್ಣು ಮಕ್ಕಳ ವಸತಿ ನಿಲಯದಲ್ಲಿ ಆಚರಿಸಲಾಯಿತು.

ವಸತಿ ನಿಲಯದ ಎಲ್ಲಾ ವಿದ್ಯಾರ್ಥಿಗಳು ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಹಾಗೂ ತಾಲೂಕು ಕಲ್ಯಾಣಾಧಿಕಾರಿ ಆಶಾದೇವಿಯವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಮಂಗಳೂರಿನ ಪಡಿ ಸಂಸ್ಥೆಯ ಪ್ರತಿನಿಧಿ ಬಿ ಮೋಹನ್ಚಂದ್ರ ಕಾಳಾವರ್ಕಾರ್ ಹಾಗೂ ನಮ್ಮ ಪ್ರಗತಿ ಗ್ರಾಮೀಣ ಅಭಿವೃದ್ಧಿ ಮತ್ತು ತಲುಪಿಸುವ ತರಬೇತಿ ಸಂಸ್ಥೆ ಕಾಳಾವರ ಇದರ ಅಧ್ಯಕ್ಷರಾದ ಮಂಜುನಾಥ ಜಿ ಉಪಸ್ಥಿತರಿದ್ದು ಭಾಗವಹಿಸಿದ್ದರು ಹಾಗೂ ಕುಂದಾಪುರದ ಆಶ್ರಮ ಶಾಲೆಯ ವಿದ್ಯಾರ್ಥಿಗಳು ಕೂಡ ಅಂತರಾಷ್ಟ್ರೀಯ ಬಾಲ್ಯ ವಿವಾಹ ವಿರೋಧಿ ದಿನವನ್ನು ಆಚರಿಸಿದರು. ಕಾರ್ಯಕ್ರಮದಲ್ಲಿ ಆಶ್ರಮ ಶಾಲೆಯ ಮುಖ್ಯ ಶಿಕ್ಷಕಿ ಪ್ರಭ ದೇವಿ ಉಪಸ್ಥಿತರಿದ್ದರು.

ಕುಂದಾಪುರ ಆಶ್ರಮ ವಸತಿ ಶಾಲೆಯಲ್ಲಿ ಅಂತರಾಷ್ಟ್ರೀಯ ಬಾಲ್ಯ ವಿವಾಹ ವಿರೋಧಿ ದಿನವನ್ನು ಆಚರಿಸಲಾಯಿತು ಶಾಲೆಯ ಮುಖ್ಯ ಶಿಕ್ಷಕಿ ಪ್ರಬಾದೇವಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಬಾಲ್ಯ ವಿವಾಹದಿಂದಾಗುವ ದುಷ್ಪರಿಣಾಮ ಹಾಗೂ ಜಾಗೃತಿ ಗೀತೆಗಳು ಹಾಗೂ ಮಾಹಿತಿಯನ್ನು ಮಕ್ಕಳಿಗೆ ನೀಡಲಾಯಿತು ಜೊತೆಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.

ಪ್ರತಿಜ್ಞಾವಿಧಿ

ನಾನು, ಭಾರತದ ಜವಾಬ್ದಾರಿಯುತ ಪ್ರಜೆಯಾಗಿ, ಬಾಲ್ಯ ವಿವಾಹದಂತಹ ಸಾಮಾಜಿಕ ಅನಿಷ್ಟ ಪದ್ಧತಿಯನ್ನು ಸಂಪೂರ್ಣವಾಗಿ ವಿರೋಧಿಸುತ್ತೇನೆ ಎಂದು ಈ ಮೂಲಕ ಪ್ರತಿಜ್ಞೆ ಮಾಡುತ್ತೇನೆ.

ನನ್ನ ಕುಟುಂಬದಲ್ಲಿ ನೆರೆಹೊರೆಯಲ್ಲಿ ಅಥವಾ ಸಮುದಾಯದಲ್ಲಿ ಎಲ್ಲಿಯೂ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹೆಣ್ಣುಮಕ್ಕಳಿಗೆ ಮತ್ತು 21 ವರ್ಷಕ್ಕಿಂತ ಕಡಿಮೆ ವಯಸ್ಸಿನ ಗಂಡುಮಕ್ಕಳಿಗೆ ವಿವಾಹವಾಗದಂತೆ ತಡೆಯಲು ನಾನು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ.

ಬಾಲ್ಯ ವಿವಾಹವು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಭವಿಷ್ಯವನ್ನು ನಾಶಪಡಿಸುವ ಕಾನೂನುಬಾಹಿರ ಅಪರಾಧವಾಗಿದೆ ಎಂಬ ಅರಿವನ್ನು ಎಲ್ಲರಲ್ಲೂ ಮೂಡಿಸುತ್ತೇನೆ. ಎಲ್ಲಿಯಾದರೂ ಬಾಲ್ಯ ವಿವಾಹ ನಡೆಯುತ್ತಿರುವುದು ಕಂಡುಬಂದರೆ, ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳಿಗೆ ಅಥವಾ ಮಕ್ಕಳ ಸಹಾಯವಾಣಿ (1098) ಗೆ ಮಾಹಿತಿ ನೀಡುತ್ತೇನೆ.

ಮಕ್ಕಳ ಹಕ್ಕುಗಳನ್ನು ರಕ್ಷಿಸಲು ಮತ್ತು ಬಾಲ್ಯ ವಿವಾಹ ಮುಕ್ತ ಸಮಾಜವನ್ನು ನಿರ್ಮಿಸಲು ನಾನು ಸದಾ ಬದ್ಧನಾಗಿರುತ್ತೇನೆ /ಬದ್ಧಳಾಗಿರುತ್ತೇನೆ”

Related Articles

Back to top button
error: Content is protected !!