ಲಾಡ್ಜ್‌ನಲ್ಲಿ ನರ್ಸಿಂಗ್ ವಿದ್ಯಾರ್ಥಿನಿಗೆ ಚಾಕು ಚುಚ್ಚಿ ಭೀಕರ ಕೊಲೆ, ಪ್ರಿಯಕರ ಅರೆಸ್ಟ್
Views: 25
ಕನ್ನಡ ಕರಾವಳಿ ಸುದ್ದಿ: ಪ್ರಿಯತಮೆಗೆ ಚಾಕುವಿನಿಂದ ಚುಚ್ಚಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ನಗರದ ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದ್ದು, ಆರೋಪಿ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ.

ಗಂಗಾ (22) ಕೊಲೆಯಾದ ಮಾಡಿದ ಆರೋಪದಡಿ ಕೊಲೆ ಪ್ರಕರಣ ದಾಖಲಿಸಿಕೊಂಡು, ಯುವತಿ. ಈಕೆಯನ್ನು ಹತ್ಯೆ ಆರೋಪಿ ಗೋಕುಲ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಬ್ಬರೂ ಕೇರಳ ಮೂಲದವರಾಗಿದ್ದು, ನೆಲಮಂಗಲದ ಹರ್ಷ ಕಾಲೇಜಿನಲ್ಲಿ ನರ್ಸಿಂಗ್ ಮುಗಿಸಿದ್ದರು. ಗೋಕುಲ್, ಗಂಗಾಳಿಗಿಂತ ಸೀನಿಯರ್ ಆಗಿದ್ದ. ಯುವತಿಯು ಕೆಲಸಕ್ಕಾಗಿ ನಗರಕ್ಕೆ ಗೋಕುಲ್‌ನೊಂದಿಗೆ ಬಂದಿದ್ದಳು. ಕಾಟನ್ ಪೇಟೆಯ ರಿಜೆನ್ಸಿ ಲಾಡ್ಜ್‌ನಲ್ಲಿ ರೂಮ್ ಬುಕ್ ಮಾಡಿದ್ದರು. ಬೆಳಿಗ್ಗೆ ಇಬ್ಬರ ಮಧ್ಯೆ ಮನಸ್ತಾಪವಾಗಿದೆ. ಗಲಾಟೆ ವಿಕೋಪಕ್ಕೆ ಹೋದಾಗ ಚಾಕುವಿನಿಂದ ಗಂಗಾಳ ಹೊಟ್ಟೆಗೆ ಗೋಕುಲ್ ಚುಚ್ಚಿದ್ದಾನೆ. ರಕ್ತಸ್ರಾವಗೊಂಡಿದ್ದು, ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತಪಟ್ಟಿದ್ದಾಳೆ.
ಸದ್ಯ ಆರೋಪಿಯನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿ ಪಡೆದು ಹೆಚ್ಚಿನ ವಿಚಾರಣೆಗೊಳಪಡಿಸಿದ ಬಳಿಕ ಕೊಲೆಗೆ ನಿಖರ ಕಾರಣ ತಿಳಿಯಬೇಕಿದೆ. ಘಟನೆ ಸಂಬಂಧ ಯುವತಿಯ ಪೋಷಕರಿಗೆ ಮಾಹಿತಿ ನೀಡಲಾಗಿದ್ದು, ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಗಾಂಧಿನಗರ ಉಪವಿಭಾಗದ ಡಿಸಿಪಿ ಲಕ್ಷ್ಮಿ ಗಣೇಶ್, ಶುಕ್ರವಾರ ಬೆಳಗ್ಗೆ ಇಬ್ಬರ ಮಧ್ಯೆ ಜಗಳವಾಗಿದೆ. ಚಾಕುವಿನಿಂದ ಯುವತಿಗೆ ಚುಚ್ಚಿ ಹತ್ಯೆ ಮಾಡಿದ ಆರೋಪ ಸಂಬಂಧ ಯುವಕನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.






