ಶಿಕ್ಷಣ

ಉಡುಪಿ ಜಿಲ್ಲಾ ಪ.ಪೂ ಕಾಲೇಜುಗಳ ಸಂಖ್ಯಾಶಾಸ್ತ್ರ ಉಪನ್ಯಾಸಕರ ವೇದಿಕೆ ಅಧ್ಯಕ್ಷರಾಗಿ ವಕ್ವಾಡಿ ಪ್ರಭಾಕರ ಶೆಟ್ಟಿಗಾರ ಆಯ್ಕೆ

Views: 0

ಉಡುಪಿ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಸಂಖ್ಯಾಶಾಸ್ತ್ರ ಉಪನ್ಯಾಸಕರ ವೇದಿಕೆಯ ಅಧ್ಯಕ್ಷರಾಗಿ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ಟೆಂಪಲ್ ಪದವಿಪೂರ್ವ ಕಾಲೇಜಿನ ಹಿರಿಯ ಸಂಖ್ಯಾಶಾಸ್ತ್ರ ಉಪನ್ಯಾಸಕ ವಕ್ವಾಡಿ ಪ್ರಭಾಕರ್ ಶೆಟ್ಟಿಗಾರ್ ಆಯ್ಕೆಯಾಗಿದ್ದಾರೆ.

ಇವರು ರಂಗನಟ,ಹವ್ಯಾಸಿ ಯಕ್ಷಗಾನ ಕಲಾವಿದರು ಹಾಗೂ ಉತ್ತಮ ಕ್ರೀಡಾಪಟುಗಳಾಗಿ ವಿವಿದೆಡೆ ಪುರಸ್ಕಾರ ಸ್ವೀಕರಿಸಿದ್ದಾರೆ.

ಪ್ರಸ್ತುತ ಶೈಕ್ಷಣಿಕ ವರ್ಷದ ಉಡುಪಿ ಜಿಲ್ಲಾ ಪದವಿಪೂರ್ವ ಸಂಖ್ಯಾಶಾಸ್ತ್ರ ಉಪನ್ಯಾಸಕರಿಗಾಗಿ ಒಂದು ದಿನದ ವಿಷಯಾಧರಿತ ಪುನ್ಚಚೇತನ ಕಾರ್ಯಗಾರವು ಉಡುಪಿಯ ಮಹಾತ್ಮ ಗಾಂಧಿ ಮೆಮೋರಿಯಲ್ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಯ್ಕೆಗೊಂಡರು.

ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಶ್ರೀ ಮಾರುತಿ ಅವರು ಕಾರ್ಯಗಾರವನ್ನು ಉದ್ಘಾಟಿಸಿದರು.

ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಮಾಲತಿ ದೇವಿ ಕಾರ್ಯಗಾರದ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಎಂಜಿಎಂ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ. ಲಕ್ಷ್ಮೀ ನಾರಾಯಣ ಕಾರಂತ ಅವರು ಮಾತನಾಡಿದರು.

ಸಂಖ್ಯಾಶಾಸ್ತ್ರ ಉಪನ್ಯಾಸಕರ ವೇದಿಕೆ ಅಧ್ಯಕ್ಷ ಪ್ರತಿಭಾ ಬಾಳಿಗ ಸ್ವಾಗತಿಸಿದರು. ಉಪನ್ಯಾಸಕಿ ಸ್ವಾತಿ ನಿರೂಪಿಸಿದರು.

ಕಾರ್ಯಗಾರದ ಸಂಪನ್ಮೂಲ ವ್ಯಕ್ತಿ ಹಾಗೂ ಸಂಖ್ಯಾಶಾಸ್ತ್ರ ಉಪನ್ಯಾಸಕರ ವೇದಿಕೆಯ  ಮಂದಾರ್ತಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ವಕ್ವಾಡಿ ಪ್ರಭಾಕರ ಶೆಟ್ಟಿಗಾರ್ ವಂದಿಸಿದರು.

Related Articles

Back to top button