ಇತರೆ

ರೈಲಿನಲ್ಲಿ ಅಗ್ನಿ ಅವಘಡ :10 ಜನ ಮೃತ್ಯು

Views: 17

ಮಧುರೈ ರೈಲು ನಿಲ್ದಾಣದಲ್ಲಿ ಅಗ್ನಿ ಅವಗಡ ಸಂಭವಿಸಿ 10 ಜನ ಸಜೀವ ದಹನವಾದ ಘಟನೆ ನಡೆದಿದೆ.

ಇಂದು ಮುಂಜಾನೆ ನಿಂತಿದ್ದ ರೈಲು ಬೋಗಿಯಲ್ಲಿ ಸಂಭವಿಸಿದ ಭಾರಿ ಬೆಂಕಿಯಲ್ಲಿ ಕನಿಷ್ಠ 10 ಜನರು ಸಾವನಪ್ಪಿದ್ದಾರೆ ಎನ್ನಲಾಗಿದ್ದು, 20ಕ್ಕೂ ಹೆಚ್ಚು ಜನರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಇಂದು ಮುಂಜಾನೆ 5.15ಕ್ಕೆ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಅರ್ಧ ಗಂಟೆಯ ನಂತರ ಬೆಂಕಿಯನ್ನು ನಂದಿಸಿದ್ದಾರೆ. ಎಂದು ದಕ್ಷಿಣ ರೈಲ್ವೆ ಪ್ರಕಟಣೆ ತಿಳಿಸಿದೆ.

ಗಾಯಗೊಂಡಿರುವ ಜನರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Related Articles

Back to top button
error: Content is protected !!