ಜನಮನ
ಮಂಗಳೂರು ಕಾಲೇಜು ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆ :7 ಆರೋಪಿಗಳ ಬಂದನ

Views: 0
ಮಂಗಳೂರು ನಗರದಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ಕಾರಿನಲ್ಲಿ ಅಪಹರಿಸಿ ಹಲ್ಲೆ ಮಾಡಿದ ಆರೋಪದ ಮೇರೆಗೆ 7 ಮಂದಿ ಆರೋಪಿಗಳನ್ನು ಬಂದರು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಪಾಣೆ ಮಂಗಳೂರು ಸಮೀಪದ ಇಬ್ರಾಹಿಂ( 19 )ಹನ್ನಾರ್ (19) ಶಾಹಿರ್ (19) ತನ್ವೀರ್ (20) ರಶೀದ್ (19 )ಮನ್ಸೂರ್( 37) ಎಂದು ಗುರುತಿಸಲಾಗಿದೆ.
ನಗರದ ಸಂತ ಅಲೋಶಿಯಸ್ ಕಾಲೇಜು ಬಳಿ ವಿದ್ಯಾರ್ಥಿಗಳಾದ ಶಾಮೀರ್ ಮತ್ತು ಇಬ್ರಾಹಿಂ ಎಂಬುವರನ್ನು ಈ ಆರೋಪಿಗಳು ಕಾರಿನಲ್ಲಿ ಕರೆದುಕೊಂಡು ಹೋಗಿ ಹಲ್ಲೆ ನಡೆಸಿದರು. ಎನ್ನಲಾಗಿದೆ.
ಗಾಯಾಳುಗಳು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ .ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






