ರಾಜಕೀಯ

ಸದ್ಯದ ಪರಿಸ್ಥಿತಿಯಲ್ಲಿ ಕರ್ನಾಟಕ ಬಿಜೆಪಿಯಲ್ಲಿ ನಾಯಕರಿಲ್ಲ; ಪಕ್ಷ ಹೀನಾಯ ಸ್ಥಿತಿಗೆ ತಲುಪಲಿದೆ: ಜಗದೀಶ್ ಶೆಟ್ಟರ್

Views: 0

ಕರ್ನಾಟಕದಲ್ಲಿ ಹೊಸ ಸರ್ಕಾರ ರಚನೆಯಾಗಿ ಮೂರು ತಿಂಗಳು ಕಳೆದರೂ ರಾಜ್ಯ ಬಿಜೆಪಿಗೆ ಮಾತ್ರ ಇಂದಿಗೂ ವಿಪಕ್ಷ ನಾಯಕ, ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಕಗ್ಗಂಟಾಗಿ ಉಳಿದೆ.

ಈ ವಿಚಾರವಾಗಿ ಬಿಜೆಪಿ ವಿರುದ್ಧ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಿಡಿ ಕಾರಿದ್ದು, ಸದ್ಯದ ಪರಿಸ್ಥಿತಿಯಲ್ಲಿ ನೋಡಿದರೆ ಬಿಜೆಪಿಯಲ್ಲಿ ನಾಯಕರಿಲ್ಲದಂತಾಗಿದೆ ಎಂದರು.

ಕರ್ನಾಟಕ ಬಿಜೆಪಿಯಲ್ಲಿ ನಾಯಕರಿಲ್ಲದ ಕಾರಣ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡಲು ಸಾಧ್ಯವಾಗದೆ ಬಿಜೆಪಿ ಸ್ಥಿತಿ ಹದಗೆಟ್ಟಿದ್ದು, ಮತ್ತಷ್ಟು ಹೀನಾಯ ಸ್ಥಿತಿಗೆ ತಲುಪಲಿದೆ ಎಂದು ಭವಿಷ್ಯ ನುಡಿದರು.

ಮಣಿಪಾಲದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಶೆಟ್ಟರ್ ಬಿಜೆಪಿಯಲ್ಲಿ ಅನೇಕ ನಾಯಕರು ಇನ್ನೂ ನೋವು ಅನುಭವಿಸುತ್ತಿದ್ದಾರೆ, ಅವರಲ್ಲಿ ಅನೇಕರು ಹೊರಬರಲು ಕಾಯುತ್ತಿದ್ದಾರೆ, ಕೆಲವು ಬಿಜೆಪಿ ನಾಯಕರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ ಎಂದಿದ್ದಾರೆ.

ಬಿಜೆಪಿ ಹೈಕಮಾಂಡ್ ನಿಂದ ನನಗೆ ಯಾವುದೇ ಕರೆ ಇಲ್ಲದಿರುವಾಗ ಈ ವಿಚಾರವಾಗಿ ನಾನೇಕೆ ಚರ್ಚಿಸಲಿ ಎಂದು ತಿಳಿಸಿದರು.

ಕರ್ನಾಟಕದಲ್ಲಿ ಕಾಂಗ್ರೆಸ್ 15ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ. ಇದು ಆಶ್ಚರ್ಯ ಪಡುವಂತಹ ವಿಚಾರವಲ್ಲ, ಪ್ರತಿ ತಾಲೂಕು, ಜಿಲ್ಲಾ ಮಟ್ಟದಲ್ಲಿ ಕಾಂಗ್ರೆಸ್ ಸೇರಲು ಉಸ್ಸುಕರಾಗಿದ್ದಾರೆ ಎಂದು ಹೇಳಿದರು.

Related Articles

Back to top button
error: Content is protected !!