ಜನಮನ
ಶಿವಮೊಗ್ಗದಲ್ಲಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರ ಕೊಲೆ

Views: 0
ಶಿವಮೊಗ್ಗದಲ್ಲಿ ವ್ಯಕ್ತಿಯೊಬ್ಬರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ.
ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಟಿಪ್ಪು ನಗರ ಏಳನೇ ತಿರುವಿನಲ್ಲಿ ಈ ಘಟನೆ ಸಂಭವಿಸಿದೆ.
ಸುಮಾರು 50 ವರ್ಷ ವ್ಯಕ್ತಿ ಒಬ್ಬನ ತಲೆ ಮೇಲೆ ಕಲ್ಲು ಎತ್ತಿ ಹಾಕಲಾಗಿದೆ. ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲಿಯೇ ವ್ಯಕ್ತಿ ಮೃತಪಟ್ಟಿದ್ದಾರೆ.
ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿಷಯ ತಿಳಿಯುತ್ತಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






