ಜನಮನ
ಮಳೆಗಾಗಿ ಮಕ್ಕಳಿಗೆ ಮದುವೆ

Views: 127
ಗ್ರಾಮದ ಮಧ್ಯಭಾಗದ ಬೀದಿಯಲ್ಲಿ ಮಹಿಳೆಯರೆಲ್ಲ ಕೂತು ಸೋಬಾನೆ ಗೀತೆ ಹಾಡಿ ಮದುವೆಯಲ್ಲಿ ಭಾಗಿಯಾಗಿದ್ದಾರೆ. ಚಿಕ್ಕ ಬಾಲಕರು ಥೇಟ್ ವರ-ವಧುವಿನಂತೆ ಕಂಗೊಳಿಸಿದ್ದಾರೆ. ವರನ ಪೋಷಾಕುನಲ್ಲಿದ್ದ ಬಾಲಕ ವಧು ವೇಷದಲ್ಲಿದ್ದ ಮತ್ತೋರ್ವ ಬಾಲಕನಿಗೆ ಅರಿಶಿನ ಕೊಂಬು (ತಾಳಿ) ಕಟ್ಟುವ ಮೂಲಕ ಮದುವೆ ಮಾಡಲಾಗಿದೆ
ಅಂದಹಾಗೆ ಮಳೆ ಬಾರದಂತಹ ಸಂದರ್ಭದಲ್ಲಿ ಈ ರೀತಿ ಮಕ್ಕಳಿಗೆ ಮದುವೆ ಮಾಡಿಸಿ ಮಳೆಗಾಗಿ ಪ್ರಾರ್ಥಿಸಿದರೆ ಮಳೆ ಬರುತ್ತದೆ ಎನ್ನುವ ನಂಬಿಕೆ ಜನರದ್ದು. ಹೀಗಾಗಿ ಮಕ್ಕಳ ಮದುವೆ ಮಾಡಿಸಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈ ಬಾರಿ ನೀರಿಕ್ಷಿಸಿದಷ್ಟು ಮಳೆ ಬಾರದೆ ಇದ್ದುದರಿಂದ ರಾಗಿ, ಮೆಕ್ಕೆಜೋಳ, ಅವರೆ, ತೊಗರಿ ಸೇರಿದಂತೆ ಮಳೆಯಾಶ್ರಿತ ಬೆಳೆಗಳೆಲ್ಲವೂ ಒಣಗಿ ಬಾಡಿ ಹೋಗುತ್ತಿವೆ. ಹೀಗಾಗಿ ಅನ್ನದಾತರು ಆಕಾಶದತ್ತ ಮುಖ ಮಾಡಿ ಮಳೆ ಯಾವಾಗ ಬರುತ್ತದೆ ಎಂದು ಕಾದು ನೋಡುವಂತಾಗಿದೆ. ಮಳೆಗಾಗಿ ಹಾತೊರೆಯುತ್ತಿರುವ ಜನರು ಹಳೆಯ ಸಂಪ್ರದಾಯಗಳಂತೆ ಮದುವೆ ನಡೆದಿದೆ






