ಸೆ.18 ರಿಂದ 5 ದಿನಗಳ ಕಾಲ ಸಂಸತ್ ಅಧಿವೇಶನ: ಪ್ರಹ್ಲಾದ್ ಜೋಶಿ

Views: 0
ಸೆಪ್ಟೆಂಬರ್ 18 ರಿಂದ 5 ದಿನಗಳ ಕಾಲ ಸಂಸತ್ತಿನ ವಿಶೇಷ 5 ದಿನಗಳ ಅಧಿವೇಶನವನ್ನು ಕೇಂದ್ರ ಸರ್ಕಾರ ಕರೆದಿದೆ.
ಈ ಕುರಿತು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮಾಹಿತಿ ನೀಡಿದ್ದು, ಸರ್ಕಾರ ಸೆಪ್ಟೆಂಬರ್ 18 ರಿಂದ ಸೆಪ್ಟೆಂಬರ್ 22ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆದಿದೆ ಎಂದು ಹೇಳಿದ್ದಾರೆ.
ಸಂಸತ್ತಿನ ವಿಶೇಷ ಅಧಿವೇಶನವನ್ನು (17ನೇ ಲೋಕಸಭೆಯ 13ನೇ ಅಧಿವೇಶನ ಮತ್ತು ರಾಜ್ಯಸಭೆಯ 261ನೇ ಅಧಿವೇಶನ) ಸೆಪ್ಟೆಂಬರ್ 18ರಿಂದ 22ರವರೆಗೆ ಐದು ದಿನಗಳ ಕಾಲ ಅಧಿವೇಶನಗಳನ್ನು ನಡೆಸಲಾಗುತ್ತಿದೆ. ಅಮೃತ್ ಕಾಲದ ಈ ಮಹತ್ವದ ಕಾಲಫಟ್ಟದಲ್ಲಿ ಒಂದು ರಚನಾತ್ಮಕ ಅಧಿವೇಶವನ್ನು ಮುನ್ನೋಡುತ್ತಿದ್ದೇವೆ. ಎಂದು ಜೋಶಿ ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.
ಈ ಬಾರಿಯ ಸಂಸತ್ತಿನ ಮುಂಗಾರು ಅಧಿವೇಶನ ಜು.20ರಿಂದ ಪ್ರಾರಂಭವಾಗಿ ಆ.11ರವರೆಗೆ ನಡೆದಿತ್ತು. ಬಿಜೆಪಿಯ ಎನ್ಡಿಎ ಒಕ್ಕೂಟ ಮತ್ತು ವಿರೋಧ ಪಕ್ಷ I.N.D.I.A ಬಣದ ನಡುವೆ ಸದನದಲ್ಲಿ ಭಾರೀ ವಾಕ್ಸಮರಗಳು ನಡೆದಿತ್ತು.
ಮಣಿಪುರ ಜನಾಂಗೀಯ ಹಿಂಸಾಚಾರದ ಬಗ್ಗೆ ಪ್ರಧಾನಿ ಪ್ರತಿಕ್ರಿಯಿಸುವಂತೆ ಸಂಸತ್ತಿನಲ್ಲಿ ಪ್ರತಿಪಕ್ಷಗಳು ಪಟ್ಟು ಹಿಡಿದಿತ್ತು. ಇದೇ ವಿಚಾರಕ್ಕೆ I.N.D.I.A ಒಕ್ಕೂಟ ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಮಂಡಿಸಿತ್ತು.
ನವದೆಹಲಿಯಲ್ಲಿ ನಡೆಯಲಿರುವ G20 ಸಮ್ಮೇಳನದ ಬಳಿಕ ಅಧಿವೇಶನ ನಡೆಯಲಿದ್ದು, ಯಾವ ವಿಚಾರದ ಬಗ್ಗೆ ವಿಶೇಷ ಅಧಿವೇಶನ ನಡೆಯಲಿದೆ ಎಂಬ ಬಗ್ಗೆ ಸ್ಪಷ್ಟವಾಗಿ ಮಾಹಿತಿ ಬಹಿರಂಗಪಡಿಸಿಲ್ಲ.






