ಸಾಂಸ್ಕೃತಿಕ
ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಖ್ಯಾತ ಮಲೆಯಾಳಂ ನಟಿ

Views: 0
ತಿರುವನಂತಪುರಂ: ಹಲವಾರು ಚಿತ್ರಗಳಲ್ಲಿ ಹಾಗೂ ಧಾರಾವಾಹಿಗಳಲ್ಲಿ ನಟಿಸಿರುವ ಖ್ಯಾತ ನಟಿ ಅಪರ್ಣಾ ಪಿ.ನಾಯರ್ ಅವರು ತಮ್ಮ ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಅವರಿಗೆ 31 ವರ್ಷ ವಯಸ್ಸಾಗಿತ್ತು.
ಗುರುವಾರ ಸಂಜೆ ತಮ್ಮ ನಿವಾಸದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಅಪರ್ಣಾ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ಆಸ್ಪತ್ರೆಯ ಮೂಲಗಳು ಮಾಹಿತಿ ನೀಡಿವೆ.
ನಟಿ ಅಪರ್ಣಾ ನಾಯರ್ ಅವರ ಹಠಾತ್ ನಿಧನ ಚಿತ್ರರಂಗಕ್ಕೆ ದೊಡ್ಡ ಆಘಾತ ನೀಡಿದಂತಾಗಿದೆ. ಅಲ್ಲದೆ ಇವರ ಅಭಿಮಾನಿ ಬಳಗಕ್ಕೆ ನಟಿ ಮೃತಪಟ್ಟಿರುವ ವಿಚಾರ ಅರಗಿಸಿಕೊಳ್ಳಲು ಆಗದಂತಾಗಿದೆ.
ಆತ್ಮಹತ್ಯೆಗೆ ಏನು ಕಾರಣ ಎಂಬುದು ಇನ್ನೂ ತಿಳಿದುಬಂದಿಲ್ಲವಾಗಿದ್ದು ತಾವು ಗುರುವಾರ ಸಂಜೆ ಇನ್ಸ್ಟಾಗ್ರಾಮ್ ನಲ್ಲಿ ಕೆಲವು ಪೋಸ್ಟ್ ಗಳನ್ನು ಹಾಕಿದ್ದು ಇದರಲ್ಲಿ ಆಕೆ ಮಾನಸಿಕ ಸಮಸ್ಯೆಗೆ ತುತ್ತಾಗಿದ್ದಾರೆ ಎನ್ನಲಾಗಿದ್ದು ಅಲ್ಲದೆ ಕೊನೆಯದಾಗಿ ತನ್ನ ಮಗಳ ಫೋಟೋ ವನ್ನು ಪೋಸ್ಟ್ ಮಾಡಿದ್ದಾರೆ.






