ರಾಜ್ಯದ ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಮಾಸ್ಕ್ ಧರಿಸುವುದು ಕಡ್ಡಾಯ: ಆರೋಗ್ಯ ಇಲಾಖೆ ಸುತ್ತೋಲೆ

Views: 0
ಕೊರೊನಾ ಪ್ರಕರಣಗಳು ನಿಧಾನಗತಿಯಲ್ಲಿ ಏರಿಕೆ ಕಂಡುಬರುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ಮಾಡಿ ಆರೋಗ್ಯ ಇಲಾಖೆ ಸುತ್ತೋಲೆ ಹರಡಿಸಿದೆ.
ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲು ಮಾರ್ಷಲ್‌ಗಳು ಅಥವಾ ಪೊಲೀಸ್ ಸಿಬ್ಬಂದಿಯ ಸಹಾಯ ಪಡೆಯುವಂತೆ ಸುತ್ತೊಲೆಯಲ್ಲಿ ಸೂಚಿಸಲಾಗಿದೆ.
ಶುಕ್ರವಾರ ರಾಜ್ಯದಲ್ಲಿ 525 ಹೊಸ ಪ್ರಕರಣಗಳು ವರದಿಯಾಗಿದ್ದು, ಅದರಲ್ಲಿ ಬೆಂಗಳೂರಿನಲ್ಲಿಯೇ 494 ಪ್ರಕರಣಗಳು ದಾಖಲಾಗಿವೆ. ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,177 ಇದ್ದು, ಬೆಂಗಳೂರಿನ ಸಕ್ರಿಯ ಪ್ರಕರಣಗಳ ಸಂಖ್ಯೆ 3,061 ಆಗಿದೆ.
ಮುಚ್ಚಿದ ಸ್ಥಳಗಳಾದ ಶಾಪಿಂಗ್ ಮಾಲ್‌ಗಳು, ರೆಸ್ಟೊರೆಂಟ್‌ಗಳು, ಪಬ್‌ಗಳು, ಹೋಟೆಲ್‌ಗಳು, ಶೈಕ್ಷಣಿಕ ಸಂಸ್ಥೆಗಳು, ಹಾಸ್ಟೆಲ್‌ಗಳು, ಕಚೇರಿಗಳು, ಕಾರ್ಖಾನೆ ಇತ್ಯಾದಿ ಪ್ರದೇಶಗಳಲ್ಲಿ ಸಿಬ್ಬಂದಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಬೇಕು. ಮಾಸ್ಕ್ ಧರಿಸಿದ್ದರೆ ಮಾತ್ರವೇ ಪ್ರವೇಶ ಕಲ್ಪಿಸುವುದು ಆಯಾ ಸಂಸ್ಥೆಯ ಮಾಲೀಕರು, ಆಡಳಿತ ಮಂಡಳಿಗಳ ಜವಾಬ್ದಾರಿಯಾಗಿದೆ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.
ಸ್ವಂತ ವಾಹನಗಳು ಹಾಗೂ ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ (ಬಸ್ ಹಾಗೂ ರೈಲು) ಪ್ರಯಾಣಿಸುವ ಸಂದರ್ಭದಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ ಎಂದು ಸೂಚಿಸಲಾಗಿದೆ.
ವಿಷಮ ಶೀತ ಜ್ವರ (ILI) ಮತ್ತು ತೀವ್ರ ಉಸಿರಾಟದ ತೊಂದರೆ (SARI) ಲಕ್ಷಣಗಳನ್ನು ಹೊಂದಿದವರು, ಹೈರಿಸ್ಕ್ ಗುಂಪಿನವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರನ್ನು ಆದ್ಯತೆಯೇ ಮೇರೆಗೆ ಪರೀಕ್ಷೆಗೆ ಒಳಪಡಿಸಬೇಕು. ಫಲಿತಾಂಶ ಲಭ್ಯವಾಗುವವರೆಗೆ ಮನೆಯಲ್ಲಿ ಪ್ರತ್ಯೇಕವಾಗಿರಬೇಕು.
ಮುಂಜಾಗ್ರತಾ ಕ್ರಮವಾಗಿ ಎಲ್ಲ ಅರ್ಹರು ಮುನ್ನೆಚ್ಚರಿಕಾ ಡೋಸ್ ಸೇರಿದಂತೆ ಕೋವಿಡ್ 19 ಲಸಿಕೆ ಪಡೆಯಬೇಕು ಎಂದು ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್ ನಿರ್ದೇಶನ ನೀಡಿದ್ದಾರೆ. ಸುತ್ತೋಲೆ ಹೊರಡಿಸಿದ ಆರೋಗ್ಯ ಇಲಾಖೆ