ರಮ್ಯಾಗೆ ಹೃದಯಾಘಾತ ಆಗಿದೆ ಎಂಬ ಸುದ್ದಿ ಸುಳ್ಳು; ಈ ಫೇಕ್ ನ್ಯೂಸ್ ಹುಟ್ಟಿದ್ದು ಹೇಗೆ?

Views: 0
ರಮ್ಯಾಗೆ ಹೃದಯಾಘಾತ ಆಗಿದೆ ಎಂಬ ಸುದ್ದಿ ಸುಳ್ಳು; ಈ ಫೇಕ್ ನ್ಯೂಸ್ ಹುಟ್ಟಿದ್ದು ಹೇಗೆ?
ರಮ್ಯಾ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದರು. ರಾಜಕೀಯಕ್ಕೆ ತೆರಳಿದ ಬಳಿಕ ಅವರು ಸಿನಿಮಾ ರಂಗದಿಂದ ದೂರವೇ ಉಳಿದುಕೊಂಡರು. ರಾಜಕೀಯವನ್ನೂ ತೊರೆದ ಬಳಿಕ ಅವರು ಯಾರ ಕೈಗೂ ಸಿಕ್ಕಿರಲಿಲ್ಲ. ಈಗ ಅವರು ಸೋಶಿಯಲ್ ಮೀಡಿಯಾ ಹಾಗೂ ಚಿತ್ರರಂಗಕ್ಕೆ ಮರಳಿದ್ದಾರೆ.

ನಟಿ ರಮ್ಯಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ’ ಎನ್ನುವ ಸುದ್ದಿ ಇಂದು ವೈರಲ್ ಆಯಿತು. ತಮಿಳು ಮಾಧ್ಯಮಗಳು ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ವರದಿ ಮಾಡಿದ್ದವು. ಆದರೆ, ಇದು ಸುಳ್ಳು ಸುದ್ದಿ ಅನ್ನೋ ಬಗ್ಗೆ ಸ್ಪಷ್ಟನೆ ಸಿಕ್ಕಿದೆ. ‘ರಮ್ಯಾ ಆರೋಗ್ಯವಾಗಿದ್ದಾರೆ’ ಎಂದು ಅವರ ಆಪ್ತರು ಸ್ಪಷ್ಟಪಡಿಸಿದ್ದಾರೆ. ಈ ವಿಚಾರ ಕೇಳಿ ಅವರ ಅಭಿಮಾನಿಗಳು ಖುಷಿಪಟ್ಟಿದ್ದಾರೆ.
ರಮ್ಯಾ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದರು. ರಾಜಕೀಯಕ್ಕೆ ತೆರಳಿದ ಬಳಿಕ ಅವರು ಸಿನಿಮಾ ರಂಗದಿಂದ ದೂರವೇ ಉಳಿದುಕೊಂಡರು. ರಾಜಕೀಯವನ್ನೂ ತೊರೆದ ಬಳಿಕ ಅವರು ಯಾರ ಕೈಗೂ ಸಿಕ್ಕಿರಲಿಲ್ಲ. ಈಗ ಅವರು ಸೋಶಿಯಲ್ ಮೀಡಿಯಾ ಹಾಗೂ ಚಿತ್ರರಂಗಕ್ಕೆ ಮರಳಿದ್ದಾರೆ. ಈ ಸಂದರ್ಭದಲ್ಲೇ ಅವರಿಗೆ ಹೃದಯಾಘಾತ ಆಗಿದೆ ಎನ್ನುವ ಸುಳ್ಳು ಸುದ್ದಿ ಹರಿದಾಡಿತ್ತು.
ರಮ್ಯ ಹೆಸರಿನ ತಮಿಳು ಕಿರುತೆರೆ ನಟಿ ಮೃತಪಟ್ಟಿದ್ದರು ಎನ್ನಲಾಗಿದೆ. ಈ ವಿಚಾರ ಹೇಳುವಾಗ ತಮಿಳುನಾಡಿನ ಕೆಲವರು ರಮ್ಯಾ ದಿವ್ಯಾ ಸ್ಪಂದನಾ ಫೋಟೋ ಹಂಚಿಕೊಂಡಿದ್ದಾರೆ. ಆ ಬಳಿಕ ಈ ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬಿದೆ. ಈಗ ರಮ್ಯಾ ಅವರು ಆರಾಮಾಗಿದ್ದಾರೆ ಎನ್ನುವ ಸುದ್ದಿ ತಿಳಿದು ಅಭಿಮಾನಿಗಳು ಖುಷಿಪಟ್ಟಿದ್ದಾರೆ.
ಸದ್ಯ ರಮ್ಯಾ ಯೂರೋಪ್ ಪ್ರವಾಸದಲ್ಲಿದ್ದಾರೆ. ಅಲ್ಲಿ ಸುತ್ತಾಡುತ್ತಾ, ಹಲವರನ್ನು ಭೇಟಿ ಮಾಡುತ್ತಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವರು ಹಲವು ಪೋಸ್ಟ್ಗಳನ್ನು ಹಾಕುತ್ತಿದ್ದಾರೆ.

ರಮ್ಯಾ ಅವರು ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡಿದ್ದರು. ಚಿತ್ರತಂಡದ ವಿರುದ್ಧ ಅವರು ಕೇಸ್ ಕೂಡ ದಾಖಲು ಮಾಡಿದ್ದರು. ಈಗ ಧನಂಜಯ್ ನಟನೆಯ ‘ಉತ್ತರಕಾಂಡ’ ಚಿತ್ರದಲ್ಲಿ ರಮ್ಯಾ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಈ ಚಿತ್ರದ ರಿಲೀಸ್ಗಾಗಿ ಅಭಿಮಾನಿಗಳು ಕಾದಿದ್ದಾರೆ. ಈ ಸಿನಿಮಾದ ಶೂಟಿಂಗ್ ಸದ್ಯ ಪ್ರಗತಿಯಲ್ಲಿದೆ.






