ರಾಜಕೀಯ

ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಗ್ರೀನ್ ಸಿಗ್ನಲ್ : ಬಿ.ಎಮ್.ಸುಕುಮಾರ್ ಶೆಟ್ಟಿ 

Views: 0

ಕುಂದಾಪುರ: ಬೈಂದೂರಿನ ಮಾಜಿ ಶಾಸಕ ಗೋಪಾಲ್ ಪೂಜಾರಿ ಶೃಂಗೇರಿಯ ಶಾಸಕ ಅವರೊಂದಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಕಾಂಗ್ರೆಸ್ ಪಕ್ಷಕ್ಕೆ ಸೇರುವ ಬಗ್ಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದೇನೆ ಎಂದು ಬೈಂದೂರಿನ ಮಾಜಿ ಶಾಸಕ ಬಿ ಎಂ ಸುಕುಮಾರ್ ಶೆಟ್ಟಿ ಅವರು ಹೇಳಿದ್ದಾರೆ.

ಅವರು ಗುರುವಾರ ನೆಂಪುವಿನ ನಿವಾಸದಲ್ಲಿ ಮಾತನಾಡಿ ಈ ವಿಷಯ ಪ್ರಸ್ತಾಪಿಸಿದರು.

ಮುಂದಿನ ದಿನಗಳಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕರೆದು ದೊಡ್ಡ ಸಮಾರಂಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರುವ ಬಗ್ಗೆ ನಿರ್ಧಾರ ಮಾಡುತ್ತೇನೆ ಎಂದರು.

ಕಳೆದ ಚುನಾವಣೆಯಲ್ಲಿ 25, ಸಾವಿರಕ್ಕೂ ಹೆಚ್ಚು ಮತಗಳಿಗಿಂತ ಗೆದ್ದು, 10 ವರ್ಷಗಳಿಂದ ಬಿಜೆಪಿಯ ಭದ್ರಕೋಟೆಯನ್ನಾಗಿ ಮಾಡಿದ್ದೇನೆ. ನನಗೆ ಚುನಾವಣೆಯಲ್ಲಿ ಟಿಕೆಟ್ ನೀಡದೆ ಬಿಜೆಪಿಯವರು ಕಾಲೆಳೆಯುವ ಕೆಲಸ ಮಾಡಿದ್ದಾರೆ.ಇದರಿಂದ ನಾನು ತುಂಬಾ ಮಾನಸಿಕವಾಗಿ ನೊಂದು ಕೊಂಡಿದ್ದೇನೆ. 

ಬಿಜೆಪಿಯಲ್ಲಿ ನನಗೆ ಭವಿಷ್ಯವಿಲ್ಲ ಎಂಬ ದೃಢವಾದ ನಿರ್ಧಾರ ಮಾಡಿದ್ದೇನೆ, ಇಲ್ಲಿಯವರೆಗೆ ವಿರೋಧ ಪಕ್ಷದ ನಾಯಕ ಮತ್ತು ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡುವಲ್ಲಿ ಬಿಜೆಪಿ ವಿಫಲವಾಗಿದೆ. ಕರಾವಳಿಯನ್ನು ಬಿಟ್ಟು ಬೇರೆ ಎಲ್ಲಿಯೂ ಬಿಜೆಪಿ ತನ್ನ ಅಸ್ತಿತ್ವ ಕಳೆದುಕೊಂಡಿದೆ. 

ಕಾಂಗ್ರೆಸ್ ನಿಂದ ನನಗೆ ಅಹ್ವಾನವಿದೆ. ಮುಂದಿನ ದಿನಗಳಲ್ಲಿ ಡಿಕೆ ಶಿವಕುಮಾರ್ ಸಿದ್ದರಾಮಯ್ಯ ಅವರನ್ನು ಕರೆದು ದೊಡ್ಡ ಸಮಾರಂಭದಲ್ಲಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ನಿರ್ಧಾರ ಮಾಡುತ್ತೇನೆ.

ಬಿಜೆಪಿಯವರಿಗೆ ಸಮರ್ಥತೆ ಇದ್ದವರಿಗೆ ಅವಕಾಶವಿಲ್ಲ ನನ್ನಲ್ಲಿ ಸಮರ್ಥತೆ ಇದೆ ಎಂದು ತುಳಿದು ಹಾಕಿದ್ದಾರೆ ಇನ್ನು ಮುಂದೆ ಇಂಥಹ ಪಕ್ಷದಲ್ಲಿ ನಾನಿಲ್ಲ ಎಂದರು.

Related Articles

Back to top button
error: Content is protected !!