ಇತರೆ

ಅಪ್ರಾಪ್ತ ಬಾಲಕಿಯನ್ನು ಮದುವೆಯಾದ ಗ್ರಾಮ ಪಂಚಾಯತ್ ಅಧ್ಯಕ್ಷ 

ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಮದುವೆಯಾಗಿ ಕಾನೂನು ಉಲ್ಲಂಘಿಸಿರುವ ಆರೋಪದಡಿ ಪಂಚಾಯಿತಿ ಅಧ್ಯಕ್ಷನ ವಿರುದ್ಧ ಕ್ರಮ ಜರುಗಿಸುವಂತೆ ಊರಿನ ಪ್ರಮುಖರು ದೂರಿನಲ್ಲಿ ಒತ್ತಾಯಿಸಿದ್ದಾರೆ.

Views: 0

ಮೈಸೂರು: ನಂಜನಗೂಡು ತಾಲೂಕೊಂದರ ಗ್ರಾಮ ಪಂಚಾಯಿತಿ ಅಧ್ಯಕ್ಷರೊಬ್ಬರು ಅಪ್ರಾಪ್ತೆಯನ್ನು ಮದುವೆಯಾದ ಆರೋಪ ಕೇಳಿಬಂದಿದೆ. ಈ ಸಂಬಂಧ ಪಂಚಾಯಿತಿ ಅಧ್ಯಕ್ಷನ ವಿರುದ್ಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ರೈತ ಸಂಘದ ಉಪಾಧ್ಯಕ್ಷ ಮಹೇಶ್‌ ಸೇರಿದಂತೆ ಗ್ರಾಮದ ಪ್ರಮುಖರು ನಂಜನಗೂಡಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು (ಸಿಡಿಪಿಒ) ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ತಾಲೂಕು ಶಿಶು ಅಭಿವೃದ್ಧಿ ಅಧಿಕಾರಿ ಕವಿತಾ ಮುಂದಿನ ಕ್ರಮ ಜರುಗಿಸಿದ್ದಾರೆ.

ಗ್ರಾ.ಪಂ ಅಧ್ಯಕ್ಷ ನಂಜನಗೂಡು ತಾಲೂಕಿನ ಬಾಲಕಿಯನ್ನು 2023ರ ನಂಜನಗೂಡಿನ ಕಲ್ಯಾಣ ಮಂಟಪವೊಂದರಲ್ಲಿ ಮದುವೆಯಾಗಿದ್ದಾರೆ. ಶಾಲಾ ದಾಖಲಾತಿ ಪ್ರಕಾರ ಬಾಲಕಿಯ ಜನ್ಮ ದಿನಾಂಕ 2005ರ ಮೇ 19 ಆಗಿದೆ. ಆಕೆಗೆ ಇನ್ನೂ 18 ವರ್ಷ ತುಂಬಿಲ್ಲ. ಹೀಗಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷನ ವಿರುದ್ಧ ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.ಬಾಲಕಿಯನ್ನು ಮದುವೆ ಮಾಡಿಕೊಂಡಿರುವುದಲ್ಲದೇ ಆಕೆ ಈಗ ಗರ್ಭಿಣಿಯಾಗಿದ್ದು, ಇದು ಕೂಡ ಕಾನೂನು ಉಲ್ಲಂಘನೆಯಾಗಿದೆ. ಈ ಸಂಬಂಧ ಸಮಗ್ರ ತನಿಖೆ ನಡೆಸಿ ಈತನ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ತಮ್ಮ ಸಹಿಯೊಂದಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗೆ ದೂರು ಸಲ್ಲಿಸಿದ್ದಾರೆ. ಇದರಿಂದ ಹಾಲಿ ಗ್ರಾಪಂ ಅಧ್ಯಕ್ಷ ತನ್ನ ಸ್ಥಾನವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ನಂಜನಗೂಡು ಪೊಲೀಸರು ಈ ಕುರಿತು ಸೋಮವಾರ ರಾತ್ರಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related Articles

Back to top button
error: Content is protected !!