ಜನಮನ

ಮರ್ಮಾಂಗದಲ್ಲಿ ಅಡಗಿಸಿಟ್ಟು1ಕೆಜಿ ಕೊಕೇನ್ ಸಾಗಿಸಲು ಯತ್ನ: ಮಹಿಳೆ ಅರೆಸ್ಟ್

Views: 0

ಬೆಂಗಳೂರು: ಮರ್ಮಾಂಗದಲ್ಲಿ 1ಕೆಜಿ 144 ಗ್ರಾಂ ಡ್ರಗ್ಸ್ ಅಡಗಿಸಿಟ್ಟುಕೊಂಡು ಸಾಗಿಸುತ್ತಿದ್ದ ಕೀನ್ಯಾ ಮೂಲದ ಮಹಿಳೆಯನ್ನು  ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳ ಬಂಧಿಸಿದ್ದಾರೆ. ಮಹಿಳೆ ಡ್ರಗ್ಸ್ ಸಾಗಿಸುವ ಬಗ್ಗೆ ಖಚಿತ ಮಾಹಿತಿ ಇತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಿಳೆ ಇಥಿಯೋಪಿಯಾದ ರಾಜಧಾನಿ ಅಡಿಸ್ ಅಬಬಾದಿಂದ ನಗರದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿದ್ದಳು. ಖಚಿತ ಮಾಹಿತಿಯ ಮೇರೆಗೆ ಅಧಿಕಾರಿಗಳು ಮಹಿಳೆಯನ್ನು ಪರಿಶೀಲಿಸಿದ್ದಾರೆ. ಈ ವೇಳೆ 1 ಕೆಜಿ 144 ಗ್ರಾಂ ತೂಕದ 12 ಕೋಟಿ ರೂ. ಮೌಲ್ಯದ ಕೊಕೇನ್ ಮಹಿಳೆಯ ಮರ್ಮಾಂಗದಲ್ಲಿ ಅಡಗಿಸಿಟ್ಟುಕೊಂಡಿರುವುದು ಪತ್ತೆಯಾಗಿದೆ. ಕ್ಯಾಪ್ಸೂಲ್ ಮಾದರಿಯಲ್ಲಿ ಕೊಕೇನ್ ಅಡಗಿಸಿಟ್ಟುಕೊಂಡಿದ್ದಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸಂಬಂಧ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಆರೋಪಿ ಅದನ್ನು ಎಲ್ಲಿಗೆ ಕೊಂಡೊಯ್ಯಲು ಯತ್ನಿಸಿದ್ದಳು ಎಂಬುದರ ಬಗ್ಗೆ ತನಿಖೆಯ ನಂತರ ತಿಳಿಯಲಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

Related Articles

Back to top button
error: Content is protected !!