ಜನಮನ
ಚಿಕ್ಕಮಗಳೂರಿನಲ್ಲಿ ಸರಣಿ ಅಪಘಾತ: ಬೈಕ್ನಲ್ಲಿದ್ದ ದಂಪತಿ ಸ್ಥಳದಲ್ಲೇ ದುರ್ಮರಣ; 14 ತಿಂಗಳ ಮಗು ಸ್ಥಿತಿ ಗಂಭೀರ

Views: 0
ಮೂಡಿಗೆರೆ ಹೆದ್ದಾರಿ ಹಿರೇಗೌಜ ಬಳಿ ಟಿಪ್ಪರ್ ಲಾರಿ, ಕಾರು ಮತ್ತು ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿ ದಂಪತಿ ಮೃತಪಟ್ಟಿದ್ದು, 14 ತಿಂಗಳ ಮಗುವಿನ ಸ್ಥಿತಿ ಗಂಭೀರವಾಗಿದೆ.
ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಸಮೀಪ ಭೀಕರ ಸರಣಿ ಅಪಘಾತ ಸಂಭವಿಸಿದ್ದು ದಂಪತಿ ಸ್ಥಳದಲ್ಲೇ ಸಾವನ್ನಪಿದ್ದರೆ, ಅವರ 14 ತಿಂಗಳ ಮಗು ಗಂಭೀರವಾಗಿ ಗಾಯಗೊಂಡಿದೆ.
ಕಾರು, ಟಿಪ್ಪರ್ ಲಾರಿ, ಬೈಕ್ ನಡುವೆ ಅಪಘಾತ ನಡೆದಿದ್ದು, ಬೈಕ್ನಲ್ಲಿದ್ದ ದಂಪತಿ ಶಿವಮೊಗ್ಗ ಮೂಲದ ಸಯ್ಯದ್ ಆಸೀಫ್ (38), ಮಾಜಿನಾ (33) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರ ಜತೆಗಿದ್ದ 14 ತಿಂಗಳ ಮಗುವಿಗೆ ಗಂಭೀರ ಗಾಯಗಳಾಗಿವೆ.
ದಂಪತಿ ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ವೇಳೆ ಕಾರು, ಬೈಕ್ ಮತ್ತು ಲಾರಿ ಮಧ್ಯೆ ಈ ಅವಘಡ ಸಂಭವಿಸಿದೆ. ಟಿಪ್ಪರ್ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಕಳೆದ ರಾತ್ರಿ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.






