ಇತರೆ

ವೇಗವಾಗಿ ಚಲಿಸುತ್ತಿದ್ದ ಕಾರಿನ ಟೈರ್‌ ಸ್ಫೋಟ: ಮೂವರು ಸಾವು; ಇಬ್ಬರಿಗೆ ಗಂಭೀರ ಗಾಯ

Views: 0

ಬೆಂಗಳೂರು: ಚಲಿಸುತ್ತಿದ್ದ ಕಾರಿನ ಟೈರ್‌ ಸ್ಫೋಟಗೊಂಡು ಕಾರಿನಲ್ಲಿದ್ದ ಮೂವರು ಮೃತಪಟ್ಟ ಘಟನೆ ಉತ್ತರ ತಾಲೂಕಿನ ಅಂಚೆಪಾಳ್ಯ ಬಳಿ ನಡೆದಿದೆ.

ಕಾರು ತುಮಕೂರು ಮಾರ್ಗವಾಗಿ ಬೆಂಗಳೂರಿಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ವೇಗವಾಗಿ ಬಂದ ಕಾರಿನ ಚಕ್ರ ಬ್ಲಾಸ್ಟ್‌ ಆದ ಪರಿಣಾಮ ಅಪಘಾತ ಸಂಭವಿಸಿ ಕಾರು ನಜ್ಜುಗುಜ್ಜಾಗಿದೆ. ಮೃತರನ್ನು ಅಗಸ್ಟಿನ್ ದಾರಾರೆಡ್ಡಿ ಎಂದು ಗುರುತಿಸಲಾಗಿದೆ. ಮತ್ತೂಬ್ಬನ ಗುರುತು ಪತ್ತೆಯಾಗಿಲ್ಲ.

ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅವಘಡ ಸಂಭವಿಸಿದ್ದು, ನೆಲಮಂಗಲ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!