ಇತರೆ
ಮಂಡ್ಯದಲ್ಲಿ ಕೆಎಸ್ಆರ್ಟಿಸಿ ಬಸ್‌ಗೆ ಕಾರು ಡಿಕ್ಕಿ: ಸ್ಥಳದಲ್ಲೇ ನಾಲ್ವರ ದುರ್ಮರಣ

Views: 28
ಕೆಎಸ್ಆರ್ಟಿಸಿ ಬಸ್‌ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ದುರಂತ ಸಾವಿಗೀಡಾಗಿರುವ ಘಟನೆ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ಬಳಿಯ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ನಡೆದಿದೆ.
ಹಾಸನ ಕಡೆಯಿಂದ ಬರುತ್ತಿದ್ದ ಶಿಫ್ಟ್ ಕಾರು, ಮುಂದೆ ಹೋಗುತ್ತಿದ್ದ KSRTC ಬಸ್‌ಗೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮೃತರನ್ನು ಬೆಂಗಳೂರಿನ ಬೆಂಡಿಗನಹಳ್ಳಿಯ ನಮಿತಾ, ಬೆಂಗಳೂರಿನಲ್ಲಿ ವಾಸವಿದ್ದ ರಾಜಸ್ಥಾನ ಮೂಲದ ಪಂಕಜ್ ಶರ್ಮಾ, ಬೆಂಗಳೂರಿನ ವಂಶಿಕೃಷ್ಣ ಹಾಗೂ ಧಾರವಾಡದ ರಘುನಾಥ್ ಭಜಂತ್ರಿ ಎಂದು ಗುರುತಿಸಲಾಗಿದೆ.
ಅತಿಯಾದ ವೇಗವೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬೆಳ್ಳೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹಗಳನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.






