ಕರಾವಳಿ
ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

Views: 1
ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 2 ರ ವರೆಗೆ ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ. ಸೆಪ್ಟೆಂಬರ್ 28ರಿಂದ 30 ರ ವರೆಗೆ ಕೇರಳ ಹಾಗೂ ಕರ್ನಾಕಟದ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಕೊಡುಗು ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ ಎಂದು IMD ಮಾಹಿತಿ ನೀಡಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂಬ ಮನ್ಸೂಚನೆ ಜತೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕೇರಳದಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, 9 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.