ಕರಾವಳಿ

ಉಡುಪಿ, ಮಂಗಳೂರು ಶಾಲಾ ಕಾಲೇಜಿಗೆ ರಜೆ ಘೋಷಣೆ ಇಲ್ಲ,, ಖಾಸಗಿ ಬಸ್ ಸಂಚಾರ ಎಂದಿನಂತೆ: ಬಂದ್ ಗೆ ನೈತಿಕ ಬೆಂಬಲ ಮಾತ್ರ 

Views: 33

ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಯ ಬಿಡುವುದನ್ನು ವಿರೋಧಿಸಿ ನೂರಾರು ಕನ್ನಡ ಪರ, ರೈತಪರ ಸಂಘಟನೆಗಳು ಕರೆ ನೀಡಿರುವ ಶುಕ್ರವಾರದ ಕರ್ನಾಟಕ ಬಂದ್ ಗೆ ಕರಾವಳಿಯಲ್ಲಿ ನೈತಿಕ ಬೆಂಬಲ ಮಾತ್ರ ವ್ಯಕ್ತವಾಗಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ.

ಸರಕಾರಿ ಶಾಲೆ, ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಶಿಕ್ಷಣ ಇಲಾಖೆ ಜಿಲ್ಲಾಧಿಕಾರಿಗಳಿಗೆ ನೀಡಿದೆ. ಶಾಲಾ-ಕಾಲೇಜುಗಳಿಗೆ ಶಿಕ್ಷಣ ಇಲಾಖೆಯಿಂದ ರಜೆ ಘೋಷಣೆ ನೀಡಿಲ್ಲ. ಪರಿಸ್ಥಿತಿಯನ್ನು ಗಮನಿಸಿ ಜಿಲ್ಲಾಧಿಕಾರಿಗಳು ರಜೆ ನೀಡಬಹುದು ಎಂದು ಶಿಕ್ಷಣ ಇಲಾಖೆ ಮೌಖಿಕವಾಗಿ ಸೂಚನೆ ನೀಡಿದೆ.

ಖಾಸಗಿ ಬಸ್ ಮಾಲಕರ ಸಂಘಟನೆ ಬಂದ್ ಗೆ ನೈತಿಕ ಬೆಂಬಲ ಮಾತ್ರ ನೀಡಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳು ಎಂದಿನಂತೆ ಓಡಾಟ ನಡೆಸಲಿದೆ.

ಬಸ್ ಸಂಚಾರ ಬಂದ್ ಮಾಡುವುದರಿಂದ ವಿದ್ಯಾರ್ಥಿಗಳು, ಉದ್ಯೋಗಿಗಳು ಸೇರಿ ಸಾರ್ವಜನಿಕ ಜೀವನಕ್ಕೆ ಕಷ್ಟವಾಗುವ ಕಾರಣ ನಾವು ನೈತಿಕ ಬೆಂಬಲ ಸೂಚಿಸುತ್ತೇವೆ. ಬಸ್ ಓಡಾಟ ಎಂದಿನಂತೆ ಇರಲಿದೆ ಎಂದು ಖಾಸಗಿ ಬಸ್ ಒಕ್ಕೂಟ ತಿಳಿಸಿದೆ. ಉಭಯ ಜಿಲ್ಲೆಗಳಲ್ಲಿ ಜನಜೀವನ ಎಂದಿನಂತೆ ಇರುವ ಎಲ್ಲ ಸಾಧ್ಯತೆಗಳಿವೆ.

 

.

Related Articles

Back to top button
error: Content is protected !!