ಕಾವೇರಿ ಹೋರಾಟಕ್ಕಿಳಿದ ಮಂಗಳಮುಖಿಯರು

Views: 1
ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ಸರ್ಕಾರದ ವಿರುದ್ಧ ಕನ್ನಡ ಸಂಘಟನೆಗಳ ಒಕ್ಕೂಟ ಕರೆ ನೀಡಿದ್ದ ಕರ್ನಾಟಕ ಬಂದ್ ಬೆಂಬಲಿಸಿ ಚಿತ್ರನಟ ದರ್ಶನ್ ಅಭಿಮಾನಿಗಳು, ರಾಜಸ್ಥಾನ ಸಮಾಜ, ಮಂಗಳಮುಖಿಯರು,ಎಸ್ ಡಿ ಪಿ ಐ ಹಾಗೂ ವಿಶ್ವಕರ್ಮ ಸಮಾಜ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟಿಸಿದರು
ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕಿನಿಂದ ದರ್ಶನ್ ಸೇನಾ ಸಮಿತಿ ಆಶ್ರಯದಲ್ಲಿ ಮೆರವಣಿಗೆ ಹೊರಟ ದರ್ಶನ್ ತೂಗುದೀಪ್ ಅಭಿಮಾನಿಗಳು ಬೆಂಗಳೂರು-ಮೈಸೂರು ಹೆದ್ದಾರಿ ಮೂಲಕ ಸಾಗಿ ನಾವು ಎಂದೆಂದಿಗೂ ರೈತಪರ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ ವಿರುದ್ಧ ಧಿಕ್ಕಾರದ ಘೋಷಣೆ ಜೊತೆಗೆ ಗೋವಿಂದ ಗೋವಿಂದ ಕೆ ಆರ್ ಎಸ್ ನಲ್ಲಿ ನೀರೆಲ್ಲ ಖಾಲಿ ಗೋವಿಂದ, ನಿಲ್ಲಿಸಿ ನಿಲ್ಲಿಸಿ ತಮಿಳುನಾಡಿಗೆ ಹರಿಯುತ್ತಿರುವ ನೀರು ನಿಲ್ಲಿಸಿ ಎಂದು ಕೂಗಿದರು
ಮಂಗಳಮುಖಿಯರು ಕಾವೇರಿ ಹೋರಾಟ ಬೆಂಬಲಿಸಿ ಪ್ರತಿಭಟನೆ ನಡೆಸಿದರು.
ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಕಾವೇರಿ ಹೋರಾಟಗಾರರ ಜೊತೆ ಸೇರಿದ ಮಂಗಳಮುಖಿಯರು ಖಾಲಿ ಬಿಂದಿಗೆ ಪ್ರದರ್ಶಿಸಿ ರೈತರಿಗೆ ಆಗಿರುವ ಅನ್ಯಾಯ ಖಂಡಿಸಿದರು.






