ಶಿಕ್ಷಣ

ರಾಜ್ಯದಲ್ಲಿ ಮುಂದಿನ ಒಂದು ವರ್ಷದೊಳಗೆ 600 ಕರ್ನಾಟಕ ಪಬ್ಲಿಕ್‌ ಶಾಲೆಗಳ ಆರಂಭ; 13,500​ ಶಿಕ್ಷಕರ ನೇಮಕ – ಮಧು ಬಂಗಾರಪ್ಪ

Views: 0

ಬೆಂಗಳೂರು ಗ್ರಾಮಾಂತರ: 1 ರಿಂದ 12 ನೇ ತರಗತಿಯವರೆಗೆ ಒಂದೇ ಶಾಲೆಯಲ್ಲಿ ವಿದ್ಯಾರ್ಥಿಗಳು ವ್ಯಾಸಂಗ ಮಾಡಲು ಅವಕಾಶ ಕಲ್ಪಿಸಲು ಮೂಲ ಸೌಲಭ್ಯಗಳನ್ನು ಒಳಗೊಂಡ 600 ಕೆಪಿಎಸ್‌ ಶಾಲೆಗಳನ್ನು ಮುಂದಿನ ವರ್ಷದ ವೇಳೆಗೆ ರಾಜ್ಯಾದ್ಯಂತ ಪ್ರಾರಂಭ ಮಾಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ತಿಳಿಸಿದರು.

ಜಿಲ್ಲಾಡಳಿತ ಮತ್ತು ಜಿಪಂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಸೋಮವಾರ ವಿಶ್ವನಾಥಪುರದ ಕೆಪಿಎಸ್‌ ಶಾಲೆಯ ಆವರಣದಲ್ಲಿ ನನ್ನ ಶಾಲೆ ನನ್ನ ಕೊಡುಗೆಯಡಿಯಲ್ಲಿ ಸಿಎಸ್‌ಆರ್‌ ಅನುದಾನದಲ್ಲಿ ಮಾದರಿ ಸರಕಾರಿ ಶಾಲೆ ಯೋಜನೆ ಉದ್ಘಾಟನೆ ಮತ್ತು ನೂತನ ಶಾಲಾ ಕೊಠಡಿಗಳು ಹಾಗೂ ವಿವೇಕ ಶಾಲಾ ಕೊಠಡಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರಿ ಶಾಲೆಗಳಲ್ಲಿಮೂಲಸೌಲಭ್ಯ ಕಲ್ಪಿಸಿ, ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾಭ್ಯಾಸ ಕಲ್ಪಿಸುವುದು ಸರಕಾರದ ಜವಾಬ್ದಾರಿಯಾಗಿದೆ . ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸರಕಾರ ಶ್ರಮಿಸುತ್ತಿದ್ದು, ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಶಾಲಾ ಮಕ್ಕಳಿಗೆ ಬಿಸಿಯೂಟದ ಜತೆಗೆ ವಾರಕ್ಕೆ 2 ಮೊಟ್ಟೆ, ಚಿಕ್ಕಿ, ಬಾಳೆಹಣ್ಣು ನೀಡಲಾಗುತ್ತಿದೆ. ಈ ವರ್ಷ ಪಿಯುಸಿ ಫೇಲಾದ ವಿದ್ಯಾರ್ಥಿಗಳಿಗೆ 2 ಪೂರಕ ಪರೀಕ್ಷೆಗಳನ್ನು ನಡೆಸಿದ್ದೆವು. ಇದರ ಪ್ರತಿಫಲವಾಗಿ 4200 ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ. ವಿದ್ಯಾರ್ಥಿಗಳು ಕಡಿಮೆ ಇರುವ ಶಾಲೆಗಳನ್ನು ಒಂದು ಕಡೆ ಸ್ಥಳಾಂತರಿಸಿ ಎಲ್ಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವುದರಿಂದ ಶಿಕ್ಷಕರ ಹೊರೆ ಕಡಿಮೆ ಮಾಡಬಹುದು ಎಂದರು.

ಸಿಎಸ್‌ಆರ್‌ ಅನುದಾನದಡಿಯಲ್ಲಿ ಸರಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಲು ಸರಕಾರದ ಪ್ರಯತ್ನಗಳು ಕಾರ್ಯರೂಪದಲ್ಲಿದೆ. 1 ರಿಂದ 12 ನೇ ತರಗತಿಯವರೆಗೆ ಒಂದೇ ಶಾಲೆಯಲ್ಲಿ ವಿದ್ಯಾರ್ಥಿಗಳು ವ್ಯಾಸಂಗ ಮಾಡಲು ಅವಕಾಶ ಕಲ್ಪಿಸಲು ಹಾಗೂ ಮೂಲ ಸೌಲಭ್ಯಗಳನ್ನು ಒಳಗೊಂಡ 600 ಕೆ.ಪಿ.ಎಸ್‌ ಶಾಲೆಗಳನ್ನು ಮುಂದಿನ ವರ್ಷದ ವೇಳೆಗೆ ರಾಜ್ಯಾದ್ಯಂತ ಪ್ರಾರಂಭ ಮಾಡಲಾಗುವುದು. ಮುಂದಿನ 5 ವರ್ಷಗಳಲ್ಲಿಎರಡು ಗ್ರಾಮಗಳಿಗೆ ಒಂದರಂತೆ 2000 ಕೆ.ಪಿ.ಎಸ್‌ ಶಾಲೆಗಳನ್ನು ನಿರ್ಮಿಸಲು ಗುರಿ ಹೊಂದಲಾಗಿದೆ ಎಂದರು.

13,500 ಶಿಕ್ಷಕರ ನೇಮಕ

ಮುಂದಿನ ಶೈಕ್ಷಣಿಕ ವರ್ಷದಿಂದ 13,500 ಶಿಕ್ಷಕರನ್ನು ನೇಮಕ ಮಾಡಿಕೊಂಡು ಶಿಕ್ಷಕರ ಕೊರತೆ ನೀಗಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಹುಣಸೂರಿನ ಮಾಜಿ ಶಾಸಕ ಎಚ್‌.ಪಿ. ಮಂಜುನಾಥ ಅವರ ಮನೆಗೆ ಭೇಟಿ ನೀಡಿದ್ದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮಕ್ಕಳಿಗೆ ಪುಸ್ತಕದ ಹೊರೆ ಕಡಿಮೆ ಮಾಡುವ ಉಪಾಯ ಕಂಡುಕೊಂಡಿದ್ದೇವೆ. ಶೀಘ್ರವೇ ನ್ಯಾಯಾಲಯದ ತೀರ್ಪು ಹೊರ ಬೀಳಲಿದ್ದು, ಶಾಲಾ- ಕಾಲೇಜಿನಿಂದ ವಿದ್ಯಾರ್ಥಿ ಗಳು ಹೊರ ಗುಳಿ ಯಬಾರ ದೆಂಬ ಉದ್ದೇಶ ದಿಂದ ಮೂರು ಹಂತದ ಪರೀಕ್ಷೆ ನಡೆಸಿ ಯಶಸ್ಸು ಕಂಡಿದ್ದೇವೆ. ಸರಕಾರಿ ಶಾಲೆಗೆ ಮಕ್ಕಳನ್ನು ಆಕರ್ಷಿಸಲು ಖಾಸಗಿ ಶಾಲೆಗಳಿಗೂ ಮಿಗಿಲಾದ ಕಾರ್ಯಕ್ರಮ ರೂಪಿಸುವ ಮಹತ್ತರ ಯೋಜನೆಗೆ ಸರಕಾರ ಮುಂದಾಗಿದೆ,’’ ಎಂದು ಹೇಳಿದರು

Related Articles

Back to top button