ಕುಂದಾಪುರ:ಇಂದು ಸೇನಾಪುರ ರೈಲು ನಿಲ್ದಾಣದಲ್ಲಿ ಎಕ್ಸ್ ಪ್ರೆಸ್ ರೈಲುಗಳ ನಿಲುಗಡೆಗೆ ಒತ್ತಾಯಿಸಿ ಪ್ರತಿಭಟನೆ

Views: 0
ಕುಂದಾಪುರ ತಾಲೂಕಿನ ಸೇನಾಪುರ ರೈಲು ನಿಲ್ದಾಣದಲ್ಲಿ ಎಕ್ಸ್ ಪ್ರೆಸ್ ರೈಲುಗಳ ನಿಲುಗಡೆಗೆ ಒತ್ತಾಯಿಸಿ ಅ.10 ರಂದು ಎಕ್ಸ್ ಪ್ರೆಸ್ ರೈಲು ನಿಲುಗಡೆ ಹೋರಾಟ ಸಮಿತಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ.
ಬೆಳಿಗ್ಗೆ 10 ರಿಂದ ನಾಡ ಗ್ರಾಮ ಪಂಚಾಯತ್ ಬಳಿಯಿಂದ ಸೇನಾಪುರ ರೈಲು ನಿಲ್ದಾಣದವರೆಗೆ ಪಾದಯಾತ್ರೆ, ಪ್ರತಿಭಟನೆ ಬಳಿಕ ಸಂಬಂಧ ಪಟ್ಟ ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಸಮಿತಿಯಿಂದ ಮನವಿ ಸಲ್ಲಿಸಲಾಗುವುದು.
ಇಲ್ಲಿನ ನಿಲ್ದಾಣದಲ್ಲಿ ಮೂರು ಹಳಿಗಳಿದ್ದು ಎಲ್ಲಾ ಎಕ್ಸ್ ಪ್ರೆಸ್ ರೈಲುಗಳ ನಿಲುಗಡೆಗೆ ಅವಕಾಶವಿದ್ದರೂ ನಿತ್ಯ ಈ ಮಾರ್ಗವಾಗಿ ಸಂಚರಿಸುತ್ತಿದ್ದರೂ ಇಲ್ಲಿ ದಿನಕ್ಕೆ ಮಂಗಳೂರು- ಮಡಗಾವ್ ನಡುವೆ ಸಂಚರಿಸುವ ನಾಲ್ಕು ಪ್ಯಾಸೆಂಜರ್ ರೈಲುಗಳು ಮಾತ್ರ ನಿಲ್ಲುತ್ತಿದೆ. ಇಲ್ಲಿ ಎಕ್ಸ್ ಪ್ರೆಸ್ ಹಾಗೂ ಪ್ಯಾಸೆಂಜರ್ ರೈಲು ನಿಲುಗಡೆಯಾದರೆ ಸುತ್ತಮುತ್ತಲಿನ 24 ಗ್ರಾಮಗಳ ಜನರಿಗೆ ಅನುಕೂಲವಾಗಲಿದೆ.
ಈ ಭಾಗದ ಜನರು ಉದ್ಯೋಗಕ್ಕಾಗಿ ರತ್ನಗಿರಿ, ಗೋವಾ, ಮೈಸೂರು, ಹಾಸನ, ಬೆಂಗಳೂರು ಇನ್ನಿತರ ಕಡೆಗಳಲ್ಲಿ ಇಲ್ಲಿನ ಜನರು ನೆಲೆಸಿದ್ದು, ಜನರಿಗೆ ಪ್ರಯೋಜನವಾಗಲಿದೆ.
ಆ ನಿಟ್ಟಿನಲ್ಲಿ ಈ ಪ್ರತಿಭಟನೆ ನಡೆಯುತ್ತಿದೆ ಎಂದು ಹೋರಾಟ ಸಮಿತಿ ತಿಳಿಸಿದೆ.