ಜನಮನ

ಉಡುಪಿ:ಮಹಿಳೆ ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ವಾಪಾಸು ಬಾರದೇ ನಾಪತ್ತೆ

Views: 0

ಉಡುಪಿ: ಉಡುಪಿ ತಾಲೂಕಿನ ಮಹಿಳೆಯೊಬ್ಬರು ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಅ.6 ರಂದು ಬೆಳಗ್ಗೆ 8 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

ಉಡುಪಿ ತಾಲೂಕು ಪುತ್ತೂರು ಗ್ರಾಮದ ಕೊಡಂಕೂರು ನಿವಾಸಿ ತಾಯಿ ಅಕ್ಷತಾ (25), ಮಕ್ಕಳಾದ ವಿದ್ಯಾಶ್ರೀ (7) ಹಾಗೂ ಮಲ್ಲು(4) ನಾಪತ್ತೆಯಾದವರು ಎಂದು ಗುರುತಿಸಲಾಗಿದೆ.

ಅಕ್ಷತಾ 5 ಅಡಿ ಎತ್ತರ, ಸಾಧಾರಣ ಶರೀರ, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ಹಿಂದಿ, ತೆಲುಗು ಹಾಗೂ ತಮಿಳು ಭಾಷೆ ಮಾತನಾಡುತ್ತಾರೆ. ವಿದ್ಯಾಶ್ರೀ 3 ಅಡಿ 6 ಇಂಚು ಎತ್ತರ, ಸಪೂರ ಶರೀರ, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಮಲ್ಲು 3 ಅಡಿ ಎತ್ತರ, ಸಾಧಾರಣ ಶರೀರ, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Related Articles

Back to top button
error: Content is protected !!