ಇತರೆ

ಬಿಎಂಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ:. ಹಿಂಬಾಗದ ಚಕ್ರ ಹರಿದು ಯುವಕ ಸಾವು 

Views: 0

ಬೆಂಗಳೂರು,ನಗರದಲ್ಲಿ ಬಿಎಂಟಿಸಿ ಬಸ್ ಅಪಘಾತ ಪ್ರಕರಣಗಳು ಹೆಚ್ಚುತ್ತಿದ್ದು, ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ಹೊಡೆದು ಇಂಜಿನಿಯರ್ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಯಶವಂತಪುರದಲ್ಲಿ ಇಂದು  ನಡೆದಿದ್ದು, ಕಳೆದ 10 ದಿನಗಳಲ್ಲಿ ಬಿಎಂಟಿಸಿ ಬಸ್ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.

ಯಶವಂತಪುರ ಗಾರೆಪ್ಪನ ಪಾಳ್ಯ ರಸ್ತೆ ಮಾರ್ಗವಾಗಿ ಹೋಗುತ್ತಿದ್ದ ಬಸ್ ಹೂವಿನ ಮಾರ್ಕೆಟ್ ಸಮೀಪ ಹಿಂಭಾಗದಿಂದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.

ಗಂಗಾಧರ್ (21) ಮೃತ ದುರ್ದೈವಿ. ಹೆಚ್‌ಎಎಲ್‌ಗೆ ಇಂಟರ್ನಿಶಿಫ್ ಸರ್ಟಿಫಿಕೇಟ್ ತರಲು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಗಂಗಾಧರ್‌ಗೆ ಹೂವಿನ ಮಾರ್ಕೆಟ್ ಸಮೀಪ ಹಿಂಬಂದಿಯಿಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಈ ವೇಳೆ ಹಿಂಬದಿ ಚಕ್ರ ಹರಿದು ಗಂಗಾಧರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆ ಸಂಬಂಧ ಸ್ಥಳಕ್ಕೆ ಆಗಮಿಸಿದ ಯಶವಂತಪುರ ಸಂಚಾರ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದು, ಅಪಘಾತ ಎಸಗಿದ್ದ ಬಿಎಂಟಿಸಿ ಬಸ್ ಚಾಲಕನಿಗೆ ಠಾಣೆಗೆ ಬರುವಂತೆ ಸೂಚನೆ ನೀಡಿದ್ದಾರೆ. ಅಲ್ಲದೆ, ವಿದ್ಯಾರ್ಥಿ ಮೃತದೇಹ ಮರಣೋತ್ತರ ಪರೀಕ್ಷೆಗೆ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ.

Related Articles

Back to top button
error: Content is protected !!