ಕ್ರೀಡೆ

ಪಾಕ್ ವಿರುದ್ಧ ಭಾರತಕ್ಕೆ 7 ವಿಕೆಟ್​ಗಳ ಭರ್ಜರಿ ಜಯ: ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನ 

Views: 0

ಅಹಮದಬಾದ್: ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಪಾಕಿಸ್ತಾನ ನಡುವಿನ ಹೈವೋಲ್ಟೇಜ್​ ಏಕದಿನ ವಿಶ್ವಕಪ್​ ಪಂದ್ಯದಲ್ಲಿ ಟೀಂ ಇಂಡಿಯಾ ಪಾಕ್​ ವಿರುದ್ಧ ಆಲ್​ರೌಂಡ್​ ಪ್ರದರ್ಶನದಿಂದಾಗಿ ಏಳು ವಿಕೆಟ್​ಗಳ ಭರ್ಜರಿ ಜಯ ಗಳಿಸಿದೆ.

ಈ ಮೂಲಕ ಏಕದಿನ ಕ್ರಿಕೆಟ್ ವಿಶ್ವಕಪ್​ನಲ್ಲಿ ಪಾಕಿಸ್ತಾನವನ್ನು 8ನೇ ಬಾರಿ ಸೋಲಿಸಿದ ಕೀರ್ತಿ ಭಾರತಕ್ಕೆ ಸಲ್ಲುತ್ತದೆ. ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿನ ಗೆಲುವಿನಿಂದಾಗಿ ಭಾರತ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದ ಟೀಂ ಇಂಡಿಯಾ, ನಾಯಕ ರೋಹಿತ್​ ಶರ್ಮಾ ನಿರ್ಧಾರವನ್ನು ಸಮರ್ಥಿಸಿಕೊಂಡ ಭಾರತದ ಬೌಲರ್​ಗಳು ಎದುರಾಳಿ ತಂಡವನ್ನು 42.5 ಓವರ್​ಗಳಲ್ಲಿ 191ಕ್ಕೆ ಆಲೌಟ್​ ಮಾಡಿದ್ದರು. ಭಾರತದ ಪರ ಜಸ್ಪ್ರೀತ್​ ಬುಮ್ರಾ (7-1-19-2), ಮೊಹಮ್ಮದ್​ ಸಿರಾಜ್ (8-0-50-2), ಹಾರ್ದಿಕ್ ಪಾಂಡ್ಯ (6-0-34-2), ಕುಲದೀಪ್ ಯಾದವ್ (10-0-35-2), ರವೀಂದ್ರ ಜಡೇಜಾ (9.5-0-38-2), ಶಾರ್ದೂಲ್​ ಠಾಕೂರ್ (2-0-12-0) ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

192ರನ್​ಗಳ ಸುಲಭ ಗುರಿ ಬೆನ್ನತ್ತಿದ್ದ ಭಾರತ ತಂಡವು ನಾಯಕ ರೋಹಿತ್ ಶರ್ಮಾ (86 ರನ್, 63 ಎಸೆತ, 6 ಬೌಂಡರಿ, 6 ಸಿಕ್ಸರ್), ಶ್ರೇಯಸ್​ ಅಯ್ಯರ್​ (53 ರನ್, 62 ಎಸೆತ, 3 ಬೌಂಡರಿ, 2 ಸಿಕ್ಸರ್) ಸ್ಪೋಟಕ ಬ್ಯಾಟಿಂಗ್ ಫಲವಾಗಿ ಸುಲಭ ಗುರಿಯನ್ನು 30.3 ಒವರ್​ಗಳಲ್ಲಿ ತಲುಪಿ ಗೆಲುವಿನ ನಗೆ ಬೀರಿತ್ತು. ಈ ಮೂಲಕ ಭಾರತ ವಿಶ್ವಕಪ್​ನಲ್ಲಿ ಪಾಕಿಸ್ತಾನದ ವಿರುದ್ಧದ ತನ್ನ ಪ್ರಾಬಲ್ಯವನ್ನು ಮುಂದುವರೆಸಿದೆ.

Related Articles

Back to top button
error: Content is protected !!