ಇತರೆ
ಕುಖ್ಯಾತ ರೌಡಿಶೀಟರ್ ಬರ್ಬರ ಹತ್ಯೆ

Views: 0
ಕುಖ್ಯಾತ ರೌಡಿಯೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವ ದುರ್ಘಟನೆ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕೆರೆಮೇಗಳದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಕೈಲಾಂಚ ಹೋಬಳಿಯ ಕೆರೆಮೇಗಳ ದೊಡ್ಡಿ ಗ್ರಾಮದ ರೌಡಿಶೀಟರ್ ಲೋಕೇಶ್ (49) ಕೊಲೆಯಾದವರು.
ಲೋಕೇಶ್ ಮನೆ ಬಳಿಯೇ ನಿನ್ನೆ ಮಧ್ಯ ರಾತ್ರಿಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಸುದ್ದಿ ತಿಳಿದ ತಕ್ಷಣವೇ ಧಾವಿಸಿದ ಪೊಲೀಸರು ಸ್ಥಳದಲ್ಲಿ ಮೊಕ್ಕಂ ಹೂಡಿದ್ದು ಕೊಲೆಗಾರರ ಪತ್ತೆಗೆ ಬಲೆ ಬೀಸಿದ್ದಾರೆ. ಸ್ಥಳಕ್ಕೆ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಡಿವೈಎಸ್ಪಿ ದಿನಕರ ಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೊಲೆಯಾದ ಲೋಕೇಶ್ ವಿರುದ್ಧ ಹಲವು ಗಂಭೀರ ಪ್ರಕರಣಗಳು ರಾಮನಗರ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿವೆ .
ಲೋಕೇಶ್ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ರಾಮನಗರ ಜಿಲ್ಲಾ ಆಸ್ಪತ್ರೆಗೆ ಸಾಗಿಸಿದ್ದಾರೆ.






