ರಾಜಕೀಯ

ಮಾಜಿ ಶಾಸಕಿ ಪೂರ್ಣಿಮಾ ಹಾಗೂ ಶ್ರೀನಿವಾಸ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ

Views: 0

ಬಿಜೆಪಿಯ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹಾಗೂ ಮುಖಂಡ ಶ್ರೀನಿವಾಸ್ ಇವರುಗಳು ಇಂದು ಇವರುಗಳು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೂರ್ಣಿಮಾ ಶ್ರೀನಿವಾಸ್ ಹಾಗೂ ಅವರ ಪತಿ ಶ್ರೀನಿವಾಸ್ ಇವರುಗಳು ತಮ್ಮ ಅಪಾರ ಬೆಂಬಲಿಗರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ತಮ್ಮ ಅಪಾರ ಬೆಂಬಲಿಗರೊಂದಿಗೆ ಕಾಂಗ್ರೆಸ್‌ಗೆ ಸೇರ್ಪಡೆಯಾದರು.ಈ ಹಿಂದೆ ಹಿರಿಯೂರಿನಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿ ಪೂರ್ಣಿಮಾ ಶ್ರೀನಿವಾಸ್‌ರವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲನುಭವಿಸಿದ್ದರು. ಇವರ ಪತಿ ಶ್ರೀನಿವಾಸ್‌ರವರು ವಿಧಾನ ಪರಿಷತ್ತಿನ ಪರವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು, ಇವರಿಬ್ಬರು ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.ಕಾಂಗ್ರೆಸ್‌ಗೆ ಸೇರ್ಪಡೆಯಾದ ಪೂರ್ಣಿಮಾ ಶ್ರೀನಿವಾಸ್ ಮತ್ತು ಅವರ ಬೆಂಬಲಿಗರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಇವರುಗಳು ಕಾಂಗ್ರೆಸ್ ಪಕ್ಷದ ಧ್ವಜ ನೀಡುವ ಮೂಲಕ ಕಾಂಗ್ರೆಸ್‌ಗೆ ಬರಮಾಡಿಕೊಂಡರು.

Related Articles

Back to top button
error: Content is protected !!