ಶಿಕ್ಷಣ
ಮುಂದಿನ ವರ್ಷದಿಂದ ಸರ್ಕಾರಿ 8ನೇ ತರಗತಿ ವಿದ್ಯಾರ್ಥಿಗಳಿಗೆ ‘ಸೈಕಲ್’

Views: 0
ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆಗೆ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ಮುಂದಿನ ವರ್ಷದಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲಾ ಮಕ್ಕಳಿಗೆ ಸೈಕಲ್ ವಿತರಿಸಲಾಗುವುದು.ಶಾಲೆ ಆರಂಭವಾಗಿ ಮೂರ್ನಾಲ್ಕು ತಿಂಗಳು ಕಳೆದಿರುವುದರಿಂದ ಈಗ ಸೈಕಲ್ ವಿತರಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ.
ಅಂದಹಾಗೆ 8ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಪ್ರತಿವರ್ಷ ಇರುತ್ತದೆ. ಸರ್ಕಾರದಿಂದ ಸರ್ಕಾರಿ ಶಾಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಸೈಕಲ್ ನೀಡಲಾಗುತ್ತದೆ. ಸದ್ಯ ಈ ಬಾರಿ ಮುಂದಿನ ವರ್ಷದಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಮಾಡಲಾಗುವುದು ಎಂದು ಹೇಳಿದರು.