ಕೃಷಿ
ಮಂಗಳೂರು:ಲಂಚ ಸ್ವೀಕರಿಸುತ್ತಿದ್ದ ವೇಳೆ ಉಪ ಕೃಷಿ ನಿರ್ದೇಶಕಿ ಲೋಕಾಯುಕ್ತರ ಬಲೆಗೆ

Views: 1
ಮಂಗಳೂರು: ಒಂದು ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಕೃಷಿ ಇಲಾಖೆಯ ಅಧಿಕಾರಿಯೊಬ್ಬರು ಇಂದು ಲೋಕಾಯುಕ್ತ ಪೊಲೀಸರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರಿನ ಉಪ ಕೃಷಿ ನಿರ್ದೇಶಕಿ ಭಾರತಮ್ಮ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಅಧಿಕಾರಿ.
ನಿವೃತ್ತ ಅರಣ್ಯಾಧಿಕಾರಿಯೊಬ್ಬರ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ದೂರುದಾರರ ಪ್ರಕಾರ, ಆರೋಪಿ
“ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಡಬ್ಲ್ಯುಸಿಡಿ 2.0” ಗೆ ಸಂಬಂಧಿಸಿದ ಬಿಲ್ಗಳಿಗೆ 50 ಲಕ್ಷ ರೂ. ಬಾಕಿ ಬಿಡುಗಡೆ ಮಾಡಲು 15% ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
1 ಲಕ್ಷ ರೂ.ಲಂಚ ಸ್ವೀಕರಿಸುತ್ತಿದ್ದಾಗಲೇ ಭಾರತಮ್ಮ ಸಿಕ್ಕಿಬಿದ್ದಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.






