ಮನೆ ಶೋಧ ನಡೆಸಿ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿರುವ ಅರಣ್ಯಾಧಿಕಾರಿಗಳ ವಿರುದ್ಧ ಕೋರ್ಟ್ ಮೊರೆ:ನಟ ಜಗ್ಗೇಶ್

Views: 0
ಬೆಂಗಳೂರು:ಹುಲಿ ಉಗುರು ಹೊಂದಿರುವ ಪ್ರಕರಣದಲ್ಲಿ ಮುಜುಗರಕ್ಕೆ ಒಳಗಾಗಿರುವ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್ ಅವರು ತಮ್ಮ ಮನೆ ಶೋಧ ನಡೆಸಿ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿರುವ ಅರಣ್ಯಾಧಿಕಾರಿಗಳ ಕ್ರಮವನ್ನು ಅವರು ಪ್ರಶ್ನಿಸಿ ಕೋರ್ಟ್ ಮೊರೆ ಹೋಗಿದ್ದಾರೆ.
ಹುಲಿ ಉಗುರು ಹೊಂದಿರುವ ವಿಡಿಯೋ ಮಾಹಿತಿಯನ್ನು ಆಧರಿಸಿ ಜಗ್ಗೇಶ್ ಮನೆಗೆ ಅರಣ್ಯಾಧಿಕಾರಿಗಳು ಶೋಧ ನಡೆಸಿದ್ದಾರೆ. ಇದರಿಂದ ಅಸಮಾಧಾನಗೊಂಡ ಜಗ್ಗೇಶ್ ಅವರು ಕೋರ್ಟ್ ಮೊರೆ ಹೋಗಿ ಅರಣ್ಯಾಧಿಕಾರಿಗಳ ಕ್ರಮವನ್ನು ಪ್ರಶ್ನಿಸಿ ಅರಣ್ಯಾಧಿಕಾರಿಗಳ ಕ್ರಮವನ್ನು ಕಾನೂನುಬಾಹಿರವೆಂದು ಘೋಷಿಸಲು ಮನವಿ ಮಾಡಿದ್ದಾರೆ.
ಜಗ್ಗೇಶ್ ಅವರು 20ನೇ ವಯಸ್ಸಿನಲ್ಲಿದ್ದಾಗ ಅವರ ತಾಯಿ ಹುಲಿಯ ಉಗುರಿನ ಪೆಂಡೆಂಟ್ನ ಉಡುಗೊರೆ ನೀಡಿದ್ದರು. ಇದು ಜಗ್ಗೇಶ್ ಕೊರಳಲ್ಲೇ ಇತ್ತು. ಈ ಬಗ್ಗೆ ಅವರು ಸಂದರ್ಶನದಲ್ಲಿ ಹೇಳಿಕೊಂಡಿದ್ದರು. ಹುಲಿ ಉಗುರು ಹೊಂದಿರುವ ಪ್ರಕರಣದಲ್ಲಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಬಂಧಿಸಿದ ಬಳಿಕ ಜಗ್ಗೇಶ್ ಬಳಿಯೂ ಹುಲಿ ಉಗುರು ಇದೆ ಎನ್ನುವ ವಿಚಾರ ಮುನ್ನೆಲೆಗೆ ಬಂದಿತ್ತು.ನಟ ಜಗ್ಗೇಶ್ ಕೋರ್ಟ್ಗೆ ಮನವಿ ಮಾಡಿದ್ದಾರೆ.






