ಕ್ರೀಡೆ
ಸರಕಾರಿ ಪ್ರೌಢಶಾಲೆ ವಕ್ವಾಡಿ: ‘ಭರತ್’ ಗುಂಡೆಸೆತ, ಜಾವಲಿಂಗ್ ವಿಭಾಗದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

Views: 2
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ವಕ್ವಾಡಿಯ ಸರಕಾರಿ ಪ್ರೌಢ ಶಾಲೆಯ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ತೋಟದಬೆಟ್ಟು ಮಂಜುನಾಥ್ ಪೂಜಾರಿ ಹಾಗೂ ನಾಗರತ್ನ ಪೂಜಾರಿಯವರ ಮಗ ಭರತ್ ಕುಂದಾಪುರದಲ್ಲಿ ನಡೆದ ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಗುಂಡೆಸೆತ ಮತ್ತು ಜಾವಲಿಂಗ್ ಎರಡು ವಿಭಾಗದಲ್ಲಿ ದ್ವೀತಿಯ ಸ್ಥಾನವನ್ನು ಪಡೆದು, ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.

ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಕುಸುಮಾಕರ್ ಶೆಟ್ಟಿ ಅವರು ತರಬೇತಿ ನೀಡಿದ್ದು, ಈತ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಮತ್ತು ಕ್ರೀಡಾ ವಿಭಾಗದಲ್ಲಿ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದು,
ಈತನ ಸಾಧನೆಯನ್ನು ಗುರುತಿಸಿ, ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದದವರು, ಪೋಷಕರು, ವಕ್ವಾಡಿ ಸಮಸ್ತ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿ, ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಲಿ ಎಂದು ಶುಭ ಹಾರೈಸಿದ್ದಾರೆ.







