ಜನಮನ

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಏಕಕಾಲದಲ್ಲಿ 90 ಕಡೆ ನಸುಕಿನ ಜಾವದಲ್ಲಿ ಲೋಕಾಯುಕ್ತ ದಾಳಿ  

Views: 0

ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಬೇಟೆ ಮುಂದುವರೆದಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಕಡೆ ಸೋಮವಾರ ನಸುಕಿನ ಜಾವ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಅಧಿಕಾರಿಗಳಿಗೆ ಶಾಕ್​ ನೀಡಿದ್ದಾರೆ. ಹಲವು ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳು ಸೇರಿದಂತೆ ಏಕಕಾಲದಲ್ಲಿ 90 ಕಡೆ ​ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರು, ಚಿತ್ರದುರ್ಗ, ಕಲಬುರಗಿ, ರಾಯಚೂರು, ಹಾಸನ, ಬೀದರ್, ದೇವದುರ್ಗ ಸೇರಿದಂತೆ ಹಲವು ಜಿಲ್ಲೆಗಳ ಭ್ರಷ್ಟ ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಶೆಟ್ಟಿ ಏಕಾಏಕಿ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ವಿವಿಧ ಇಲಾಖೆಗಳ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಏಕಕಾಲದಲ್ಲಿಯೇ 90 ಕಡೆ ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎನ್ನಲಾಗುತ್ತಿದೆ.

Related Articles

Back to top button
error: Content is protected !!