ಇತರೆ

ಭೀಕರ ರಸ್ತೆ ಅಪಘಾತ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು 

Views: 0

ಕಲಬುರಗಿ: ಅಫಜಲಪುರ ತಾಲೂಕಿನ ಹಳ್ಳೋಳ್ಳಿ ಕ್ರಾಸ್ ಬಳಿ ಬೈಕ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.

ಅಪಘಾತದಲ್ಲಿ ನೇಪಾಳ ಮೂಲದ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಒಂದೇ ಬೈಕ್​​ನಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಐವರು ತೆರಳುತ್ತಿದ್ದರು.

ಎದುರಿಗೆ ಬರುತ್ತಿದ್ದ ಲಾರಿ ಬೈಕ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಮೃತರು ಅಫಜಲಪೂರನಲ್ಲಿ ಫಾಸ್ಟ್ ಫುಡ್ ಹೋಟೆಲ್ ನಡೆಸುತ್ತಿದ್ದರು. ಘಟನಾ ಸ್ಥಳಕ್ಕೆ ಅಫಜಲಪೂರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.

Related Articles

Back to top button
error: Content is protected !!