ಇತರೆ

ಪರೀಕ್ಷೆಯಲ್ಲಿ ನಕಲು ಮಾಡಿ ಸಿಕ್ಕಿಬಿದ್ದ ವಿದ್ಯಾರ್ಥಿನಿ; ಕಾಲೇಜು ಕಟ್ಟಡದಿಂದ ಜಿಗಿದು ಆತ್ಮಹತ್ಯೆ

Views: 1

ಪರೀಕ್ಷೆಯಲ್ಲಿ ನಕಲು ಮಾಡಿ ಸಿಕ್ಕಿಬಿದ್ದ ವಿದ್ಯಾರ್ಥಿನಿ; ಕಾಲೇಜು ಕಟ್ಟಡದಿಂದ ಜಿಗಿದು ಆತ್ಮಹತ್ಯೆ

ಹಾಸನ: ಕಾಲೇಜಿನ ಐದನೇ ಮಹಡಿಯಿಂದ ಜಿಗಿದು ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಹೊರವಲಯದ ರಾಜೀವ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ನಡೆದಿದೆ.

ಮಾನ್ಯ (19) ವರ್ಷ ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಪ್ರಥಮ ವರ್ಷದ ಎಲೆಕ್ಟ್ರಾನಿಕ್ ಆ್ಯಂಡ್ ಕಮ್ಯುನಿಕೇಷನ್ ಓದುತ್ತಿದ್ದ ಮಾನ್ಯ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ಚನ್ನರಾಯಪಟ್ಟಣ ತಾಲೂಕಿನ ದಂಡಿಗನಹಳ್ಳಿ ಹೋಬಳಿಯ ಹೊನ್ನಶೆಟ್ಟಿಹಳ್ಳಿ ಗ್ರಾಮದವಳಾಗಿರುವ ಮಾನ್ಯ ಗುರುವಾರ (ನ. 2) ಮೊದಲ ವರ್ಷದ ಆಂತರಿಕ ಪರೀಕ್ಷೆ ಬರೆಯುತ್ತಿದ್ದಳು. ಪರೀಕ್ಷೆ ಸಮಯದಲ್ಲಿ ಆಕೆ ನಕಲು ಮಾಡಿದ ಆರೋಪ ಕೇಳಿಬಂದಿದೆ. ಈ ವೇಳೆ ಆಕೆಯನ್ನು ಪರೀಕ್ಷಾ ಮೇಲ್ವಿಚಾರಕರು ಹಿಡಿದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಪ್ರಾಂಶುಪಾಲರ ಬಳಿಯೂ ಕರೆದುಕೊಂಡು ಹೋಗಿದ್ದಾರೆ.

ಕಾಲೇಜು ಪ್ರಾಂಶುಪಾಲರಿಗೆ ಕ್ಷಮಾಪಣಾ ಪತ್ರವನ್ನು ಬರೆದುಕೊಡುವಂತೆ ಸಹ ಉಪನ್ಯಾಸಕರು ಹೇಳಿದ್ದಾರೆನ್ನಲಾಗಿದೆ. ಕೊನೆಗೆ ಮಾನ್ಯ ಪ್ರಾಂಶುಪಾಲರ‌ ಕೊಠಡಿಗೆ ಬಂದಿದ್ದಾಳೆ. ಅಲ್ಲಿಂದ ಹೊರ ಬಂದವಳೇ ಸೀದಾ ಕಾಲೇಜಿನ ಕಟ್ಟಡದ ಐದನೇ ಮಹಡಿಗೆ ಹೋಗಿದ್ದಾಳೆ. ಅಲ್ಲಿಂದ ಕೆಳಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿಕೊಂಡಿದ್ದಾರೆ. ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಪೊಲೀಸರಿಂದ ಸ್ಥಳ ಪರಿಶೀಲನೆ ಘಟನಾ ಸ್ಥಳಕ್ಕೆ ಎಸ್‌ಪಿ ಮೊಹಮ್ಮದ್ ಸುಜೀತಾ ಭೇಟಿ ನೀಡಿದ್ದು, ಕಾಲೇಜು ಪ್ರಾಂಶುಪಾಲರನ್ನು ವಿಚಾರಿಸಿದ್ದಾರೆ. ಅಲ್ಲದೆ, ವಿದ್ಯಾರ್ಥಿನಿ ಜಿಗಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರೀಕ್ಷೆ ವೇಳೆ ನಡೆದ ಘಟನೆ ಬಗ್ಗೆಯೂ ಮಾಹಿತಿಯನ್ನು ಸಂಗ್ರಹ ಮಾಡಿದ್ದಾರೆ.

Related Articles

Back to top button
error: Content is protected !!