ಸಾಂಸ್ಕೃತಿಕ

ತೆಲುಗು ಚಿತ್ರರಂಗದ ಹಿರಿಯ ನಟ ಚಂದ್ರಮೋಹನ್​ ಹೃದಯಾಘಾತದಿಂದ ಸಾವು 

Views: 0

ತೆಲುಗು ಹಿರಿಯ ನಟ ಚಂದ್ರ ಮೋಹನ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 82 ವರ್ಷದ ನಟ ಚಂದ್ರ ಮೋಹನ್ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾದರು.

ನಟನ ಅಗಲಿಕೆಯ ವಿಷಯ ತಿಳಿಯುತ್ತಿದ್ದಂತೆ ತೆಲುಗು ಚಿತ್ರರಂಗದ ಹಲವಾರು ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ. ನಟ ಚಂದ್ರ ಮೋಹನ್ ಅವರು ಪತ್ನಿ ಜಲಂಧರ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ

ಇನ್ನೂ ಹಿರಿಯ ನಟ ಚಂದ್ರ ಮೋಹನ್ ಸಾವಿನ ವಿಷಯ ತಿಳಿಯುತ್ತಿದ್ದಂತೆ ನಟ ಜೂನಿಯರ್ ಎನ್‌ಟಿಆರ್ ಕೂಡ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ X ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಹಲವು ದಶಕಗಳಿಂದ ಚಿತ್ರರಂಗದಲ್ಲಿ ವಿಭಿನ್ನ ಪಾತ್ರಗಳನ್ನು ನಿರ್ವಹಿಸುವ ಮೂಲಕ ತಮ್ಮದೇ ಆದ ವಿಶೇಷ ಮನ್ನಣೆಯನ್ನು ಗಳಿಸಿದ ಚಂದ್ರಮೋಹನ್ ಅವರ ಅಕಾಲಿಕ ಮರಣವನ್ನು ಕಂಡು ತುಂಬಾ ದುಃಖವಾಗಿದೆ. ಅವರ ಕುಟುಂಬಕ್ಕೆ ನನ್ನ ಆಳವಾದ ಸಂತಾಪಗಳು ಮತ್ತು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದಿದ್ದಾರೆ.

Related Articles

Back to top button
error: Content is protected !!