ಇತರೆ

ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್- ಮಿನಿಬಸ್ ಮುಖಾಮುಖಿ ಡಿಕ್ಕಿ: 5 ಸಾವು,60ಜನರಿಗೆ ಗಾಯ 

Views: 1

ಬೆಂಗಳೂರು, ತಮಿಳುನಾಡು ಸಾರಿಗೆ ಸಂಸ್ಥೆಯ ಬಸ್ ಮತ್ತು ಮಿನಿಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಐವರು ಸಾವನ್ನಪ್ಪಿ,ಸುಮಾರು 60 ಮಂದಿ ಪ್ರಯಾಣಿಕರು ಗಾಯಗೊಂಡಿರುವ ದುರ್ಘಟನೆ ಇಂದು ಮುಂಜಾನೆ ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಗುಡುವಂಚೇರಿಯ ರಿತಿಕಾ (32), ವಾಣಿಯಂಬಾಡಿಯ ಮೊಹಮ್ಮದ್ ಫಿರೋಜ್ (36), ಎಸ್‌ಇಟಿಸಿ ಬಸ್ ಚಾಲಕ ಕೆ ಎಲುಮಲೈ (47) ಮತ್ತು ಚಿತ್ತೂರಿನ ಬಿ ಅಜಿತ್ (25) ಹಾಗೂ ಮಿನಿ ಬಸ್ ಚಾಲಕ ಎನ್ ಸೈಯದ್ ಮೃತಪಟ್ಟವರು.

ಅಪಘಾತದ ರಭಸಕ್ಕೆ ಎರಡು ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು,ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಹತ್ತು ಆಂಬ್ಯುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ಗಾಯಗೊಂಡಿರುವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ರಾಜ್ಯ ಎಕ್ಸ್‌ಪ್ರೆಸ್ ಸಾರಿಗೆ ಸಂಸ್ಥೆಯ ಬಸ್ ಮತ್ತು ಚೆನ್ನೈನಿಂದ ಬೆಂಗಳೂರಿಗೆ ಬರುತ್ತಿದ್ದ ಮಿನಿ ಬಸ್ ಡಿಕ್ಕಿ ಹೊಡೆದಿದೆ. ಇದರ ಪರಿಣಾಮವಾಗಿ ಓರ್ವ ಮಹಿಳೆ ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ತಮಿಳುನಾಡು ಸಾರಿಗೆ ಸಂಸ್ಥೆಯ ಬಸ್ ಮತ್ತು ಚೆನ್ನೈನಿಂದ ಬೆಂಗಳೂರಿಗೆ ಬರುತ್ತಿದ್ದ ಮಿನಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸೇರಿದಂತೆ ಐವರು ಮೃತಪಟ್ಟಿದ್ದಾರೆ.

ಮುಂಜಾನೆ 4 ವೇಳೆ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ತಿರುಪತ್ತೂರು ಜಿಲ್ಲೆಯ ವಾಣಿಯಂಬಾಡಿ ಸರ್ಕಾರಿ ಆಸ್ಪತ್ರೆಗೆ ಮತ್ತು ವೆಲ್ಲೂರಿನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಸಾವನ್ನಪ್ಪಿರುವವರ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಕಳುಹಿಸಲಾಗಿದೆ. ಅಪಘಾತದ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Related Articles

Back to top button
error: Content is protected !!