ಕ್ರಿಸ್ಗೇಲ್-ಎಬಿಡಿ ಹೆಸರಿನಲ್ಲಿರುವ ವಿಶ್ವದಾಖಲೆ ಮುರಿಯುವ ಸನಿಹದಲ್ಲಿ ರೋಹಿತ್ ಶರ್ಮಾ

Views: 1
ಬೆಂಗಳೂರು: 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನೆದರ್ಲೆಂಡ್ ತಂಡವನ್ನು ಎದುರಿಸಲಿದೆ. ನೆದರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತ ಗೆಲ್ಲುವ ಮೂಲಕ ಹಾಲಿ ವಿಶ್ವಕಪ್ ಆವೃತ್ತಿಯಲ್ಲಿ ತನ್ನ ಗೆಲುವಿನ ಓಟವನ್ನು ವಿಸ್ತರಿಸಲು ಮುಂದಾಗಿದೆ.
ಇನ್ನು ಈ ಪಂದ್ಯದಲ್ಲಿ ಭಾರತದ ನಾಯಕ ರೋಹಿತ್ ಶರ್ಮಾ ಅವರು ಹೊಸ ವಿಶ್ವ ದಾಖಲೆಯನ್ನು ರಚಿಸುವ ಅವಕಾಶವನ್ನು ಹೊಂದಿದ್ದು, ಅವರು ಕ್ರಿಕೆಟ್ ದಿಗ್ಗಜರ ದಾಖಲೆಯನ್ನು ಮುರಿಯುವ ಸನಿಹದಲ್ಲಿದ್ದಾರೆ. ನೆದರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಅವರಿಗೆ ಈ ಸಾಧನೆ ಮಾಡಲು ಅವಕಾಶವಿದ್ದು, ಹಿಟ್ಮ್ಯಾನ್ ಸಿಕ್ಕ ಅವಕಾಶವನ್ನು ಹೇಗೆ ಸದುಪಯೋಗಪಡಿಸಿಕೊಳ್ಳಿದ್ದಾರೆ ಎಂದು ಕಾದು ನೋಡಬೇಕಿದೆ.
ರೋಹಿತ್ ಶರ್ಮಾ 2023 ರ ಏಕದಿನ ವಿಶ್ವಕಪ್‌ನಲ್ಲಿ ಕಳೆದ 8 ಲೀಗ್ ಪಂದ್ಯಗಳಲ್ಲಿ 22 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಅವರ ಫಾರ್ಮ್ ನೋಡಿದರೆ, ಅವರ ಬ್ಯಾಟ್ ನೆದರ್ಲ್ಯಾಂಡ್ಸ್ ವಿರುದ್ಧವೂ ಅಬ್ಬರಿಸುವ ಸಾಧ್ಯತೆಗಳಿವೆ. ಒಂದು ವೇಳೆ ರೋಹಿತ್ ಶರ್ಮಾ ನೆದರ್ಲೆಂಡ್ಸ್ ವಿರುದ್ಧ ತಮ್ಮ ಇನ್ನಿಂಗ್ಸ್‌ನಲ್ಲಿ 5 ಸಿಕ್ಸರ್‌ಗಳನ್ನು ಬಾರಿಸಿದರೆ, ಅವರು ಕ್ರಿಸ್ ಗೇಲ್ ಅವರ ದಾಖಲೆಯನ್ನು ಮುರಿದು ವಿಶ್ವಕಪ್‌ನ ಒಂದು ಆವೃತ್ತಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟ್ಸ್‌ಮನ್ ಎನಿಸಿಕೊಳ್ಳಲಿದ್ದಾರೆ. 2015ರಲ್ಲಿ ಒಟ್ಟು 26 ಸಿಕ್ಸರ್‌ಗಳನ್ನು ಬಾರಿಸಿದ್ದ ಕ್ರಿಸ್ ಗೇಲ್ ಅವರ ಹೆಸರಿನಲ್ಲಿ ಒಂದು ವಿಶ್ವಕಪ್ ಆವೃತ್ತಿಯಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ್ದು ಈ ಹಿಂದಿನ ದಾಖಲಾಗಿತ್ತು.







