ಕರಾವಳಿ

ಉಡುಪಿ: ನೇಜಾರಿನಲ್ಲಿ ನಾಲ್ವರನ್ನು ಕೊಂದ ಹಂತಕ ಕೊನೆಗೂ ಬೆಳಗಾವಿಯಲ್ಲಿ ಬಂಧನ

Views: 0

ಉಡುಪಿಯ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಉಡುಪಿ ಪೊಲೀಸರು ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳಗಾವಿಯ ಕುಡುಚಿಯಲ್ಲಿ ಬಂಧಿಸಿದ ಉಡುಪಿ ಪೊಲೀಸರು ಆರೋಪಿ ಪ್ರವೀಣ್​​​​ ಅರುಣ್​​​ ಚೌಗಲೆ ಎಂಬಾತನನ್ನು ಬಂಧಿಸಿದ್ದಾರೆ.

ಈತ ಮಂಗಳೂರು ಏರ್​​ ಏರ್​ಪೋರ್ಟ್​ ಸೆಕ್ಯೂರಿಟಿಯಲ್ಲಿಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಸಿಆರ್‌ ಪಿಎಫ್‌ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಕೌಟುಂಬಿಕ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆರೋಪಿ ಮಹಾರಾಷ್ಟ್ರ ಸಾಂಗ್ಲಿ ಮೂಲದವನಾಗಿದ್ದಾನೆ ಎನ್ನಲಾಗಿದೆ.

ಬೆಳಗಾವಿಯ ಕುಡಚಿಯಲ್ಲಿರುವ ಸಂಬಂಧಿಯೊಬ್ಬರ ಮನೆಯಲ್ಲಿ ಆರೋಪಿ ಅವಿತುಕೊಂಡಿದ್ದು, ಮೊಬೈಲ್​​ ಟವರ್​ ಲೊಕೇಶನ್​​​ ಆಧರಿಸಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ನವೆಂಬರ್​ 12ರಂದು ನೇಜಾರಿನ  ನಲ್ಲಿರುವ ಮನೆಗೆ ಬಂದು ತಾಯಿ ಮೂವರು ಮಕ್ಕಳನ್ನು   ಭೀಕರವಾಗಿ ಹತ್ಯೆ ಮಾಡಿದ್ದ

ಆರೋಪಿಯನ್ನು ವಿಚಾರಣೆ ಮಾಡಿದ ನಂತರ ಪೊಲೀಸರು ನಾಳೆ ಸಂಪೂರ್ಣ ಮಾಹಿತಿ ನೀಡುವ ಸಾಧ್ಯತೆಯಿದೆ.

ಬೆಳಗಾವಿ ನೀರಾವರಿ ಇಲಾಖೆಯ ಅಧಿಕಾರಿಯ ಸಂಬಂಧಿಯಾಗಿರುವ ಈತ ಅಧಿಕಾರಿ ಪಾಟೀಲ್ ಅವರ ಮನೆಯಲ್ಲಿ ಅಡಗಿದ್ದು, ನಾಲ್ಕು ಕೊಲೆಯ ಹಂತಕನಾದ ಈತನನ್ನು ಉಡುಪಿ ಮತ್ತು ಬೆಳಗಾವಿ ಪೊಲೀಸರು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಕೃತ್ಯಕ್ಕೆ ಸುಪಾರಿ ನೀಡಿದ ಆರೋಪಿಗಳ ಪತ್ತೆಗೆ ಕೇರಳದ ಕೊಟ್ಟಾಯಂ ಕಡೆಗೆ ಪೊಲೀಸ್ ತಂಡದವರು ಹೋಗಿದ್ದು, ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆಯಲ್ಲಿದ್ದಾರೆ.

Related Articles

Back to top button