ಜನಮನ

ASI ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

Views: 257

ಕನ್ನಡ ಕರಾವಳಿ ಸುದ್ದಿ, :ಕಳೆದ ತಿಂಗಳು ಅಷ್ಟೇ ಬೆಳಗಾವಿ ತಹಶೀಲ್ದಾರ್ ಕೊಠಡಿಯಲ್ಲೇ SDA ನೌಕರ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಇದರ ಬೆನ್ನಲ್ಲೇ ಬೆಳಗಾವಿ ಜಿಲ್ಲೆಯಲ್ಲಿ ಎಎಸ್ಐ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾವಿನ ಕುರಿತಾಗಿ ಹಲವು ಅನುಮಾನಗಳು ಮೂಡಿವೆ.

ಆತ್ಮಹತ್ಯೆಮಾಡಿಕೊಂಡ ಎಎಸ್‌ಐ ಶಂಭು ಮೆತ್ರಿ (50) ಎಂದು ತಿಳಿದುಬಂದಿದೆ. ಐಗಳಿ ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಶಂಭು ಅವರು ಶನಿವಾರ ಅನಂತಪುರ ಗ್ರಾಮದ ತಮ್ಮ ಮನೆಯಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ. ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸಾವಿನ ವಿಚಾರ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.

 

Related Articles

Back to top button