BREAKING NEWS..ಅಡ್ವಾಣಿಗೆ ದೇಶದ ಪರಮೋಚ್ಛ ಭಾರತ ರತ್ನ ಪ್ರಶಸ್ತಿ

Views: 138
ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪಪ್ರಧಾನಿ ಎಲ್‌ಕೆ ಅಡ್ವಾಣಿ ಅವರು ದೇಶದ ಪರಮೋಚ್ಛ ನಾಗರಿಕ ಪ್ರಶಸ್ತಿ ಭಾರತ ರತ್ನಕ್ಕೆ ಭಾಜನರಾಗಿದ್ದಾರೆ, ಬಿಜೆಪಿಯ ಹಿರಿಯ ನಾಯಕರಾದ ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ಪ್ರಧಾನಿ ಮೋದಿ ಅವರು ಘೋಷಣೆ ಮಾಡಿದ್ದಾರೆ.
ಇಂದು ಮಾಜಿ ಉಪಪ್ರಧಾನಿ ಎಲ್‌ಕೆ ಅಡ್ವಾಣಿ ಅವರಿಗೆ ಭಾರತರತ್ನ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ.ಈ ಬಗ್ಗೆ ಎಕ್ಸ್ ಮಾಡಿರುವ ಪ್ರಧಾನಿ ಮೋದಿ ಅವರು ಅಡ್ವಾಣಿ ಜೀ ಅವರಿಗೆ ಭಾರತ ರತ್ನ ನೀಡುವ ಮಾಹಿತಿ ಹಂಚಿಕೊಳ್ಳಲು ನನಗೆತುಂಬ ಸಂತೋಷವಾಗಿದೆ. ನಾನು ಅವರೊಂದಿಗೆ ಮಾತನಾಡಿ ಈ ಗೌರವಕ್ಕೆ ಪಾತ್ರರಾಗಿದ್ದಕ್ಕೆ ಅಭಿನಂದಿಸಿದ್ದೇನೆ ಎಂದು ಮೋದಿ ಎಕ್ಸ್‌ನಲ್ಲಿ ಹೇಳಿದ್ದಾರೆ.ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳ ಪೈಕಿ ಅಡ್ವ್ವಾಣಿ ಅವರು ಒಬ್ಬರು, ಭಾರತದೊಂದಿಗೆ ಭಾರತದ ಅಭಿವೃದ್ಧಿಗೆ ಅವರ ಕೊಡುಗೆ ಸ್ಮರಣಾರ್ಹ. ಎಂದು ಮೋದಿ ಎಕ್ಸ್‌ನಲ್ಲಿ ಹೇಳಿದ್ದಾರೆ.ಅಡ್ವಾಣಿಯಂತಹ ಹಿರಿಯರಿಗೆ ಭಾರತರತ್ನ ಪ್ರಶಸ್ತಿ ನೀಡಲು ಹೆಮ್ಮೆ ಮತ್ತು ಖುಷಿಯಾಗುತ್ತದೆ. ಮೇರು ನಾಯಕನಿಗೆ ಭಾರತರತ್ನ ಸಿಕ್ಕಿರುವುದು ಹೆಮ್ಮೆಯ ಕ್ಷಣ ಎಂದಿದ್ದಾರೆ.
ಸಾರ್ವಜನಿಕ ಜೀವನದಲ್ಲಿ ಅಡ್ವಾಣಿ ಅವರ ದಶಕಗಳ ಸುದೀರ್ಘ ಸೇವೆ ಅಚಲವಾದ ಬದ್ಧತೆಯಿಂದ ಗುರುತಿಸಲ್ಪಟ್ಟಿದೆ ಇಷ್ಟೇ ಅಲ್ಲದೆ ಅವರು ಪಾರದರ್ಶಕತೆಗೆ ಹೆಸರಾಗಿದ್ದಾರೆ. ತಳಮಟ್ಟದಲ್ಲಿ ಕೆಲಸ ಮಾಡುವುದರೊಂದಿಗೆ ಹಿಡಿದು ನಮ್ಮ ಉಪಪ್ರಧಾನಿಯಾಗಿ ದೇಶಸೇವೆ ಮಾಡಿದ್ದಾರೆ ಎಂದು ಮೋದಿ ಎಕ್ಸ್‌ನಲ್ಲಿ ಹೇಳಿದ್ದಾರೆ.
ರಾಷ್ಟ್ರೀಯ ಏಕತೆ ಮತ್ತು ಸಾಂಸ್ಕೃತಿಕ ಪುನರುತ್ಥಾನದ ವಿಚಾರದಲ್ಲಿ ದೇಶಕ್ಕೆ ಕೊಡುಗೆ ಸಲ್ಲಿಸಲು ಅಪ್ರತಿಮ ಪ್ರಯತ್ನ ಮಾಡಿದ್ದಾರೆ ಅಡ್ವಾಣಿ ಅವರಿಗೆ ಭಾರತರತ್ನಪ್ರಶಸ್ತಿ ಪ್ರದಾನ ಮಾಡುವುದು ನನ್ನ ಪಾಲಿಗೆ ಭಾವನಾತ್ಮಕ ಕ್ಷಣ ಎಂದು ಮೋದಿ ಎಕ್ಸ್ ಮಾಡಿದ್ದಾರೆ.
ಅಡ್ವಾಣಿ ಅವರೊಂದಿಗೆ ಸಂವಹನ ನಡೆಸಲು ಮತ್ತು ಅವರಿಂದ ಕಲಿಯಲು ನನಗೆ ಅಸಂಖ್ಯಾತ ಅವಕಾಶಗಳು ಸಿಕ್ಕಿರುವುದು ನನ್ನ ಪುಣ್ಯ ಎಂದು ನಾನು ಯಾವಾಗಲು ಭಾವಿಸುತ್ತೇನೆ ಎಂದು ಮೋದಿ ತಿಳಿಸಿದ್ದಾರೆ.
ಭಾರತ ರತ್ನ ಪ್ರಶಸ್ತಿಗೆ ಭಾಜನರಾಗಿರುವ ಬಿಜೆಪಿಯ ಲಾಲಕೃಷ್ಣ ಅಡ್ವಾಣಿ ಅವರು1927 ನ. 8ರಂದು ಅವಿಭಜಿತ ಭಾರತದ ಸಿಂಧ್ ಪ್ರಾಂತ್ಯದ ಗೊರೇಗಾಂವ್‌ನಲ್ಲಿ ಜನಿಸಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೂಲಕ ರಾಜಕಾರಣ ಪ್ರವೇಶಿಸಿದ ಲಾಲಕೃಷ್ಣ ಅಡ್ವಾಣಿ ಅವರು ಜನಸಂಘ ಸ್ಥಾಪನೆಯಲ್ಲಿ ಪ್ರಮುಖಪಾತ್ರ ವಹಿಸಿದ್ದರು. ದೇಶದಲ್ಲಿ ಬಿಜೆಪಿ ಕಟ್ಟುವಲ್ಲಿ ಅಡ್ವಾಣಿ ಅವರ ಶ್ರಮ ಬಹಳ ದೊಡ್ಡದು. ಅವರು ಕೇಂದ್ರ ಸಚಿವರಾಗಿ ಹಲವು ಖಾತೆಗಳನ್ನು ನಿಭಾಯಿಸಿ ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.2002 ರಿಂದ 2೦೦8ರವರೆಗೆ ಉಪ ಪ್ರಧಾನಿಯಾಗಿಯೂ ಅವರು ಸೇವೆ ಸಲ್ಲಿಸಿದ್ದರು.
ಕಾನೂನು ಪದವೀಧದರಾದ ಲಾಲಕೃಷ್ಣ .ಅಡ್ವಾಣಿ ಅವರು ತುರ್ತು ಪರಿಸ್ಥಿತಿಯ ಸಂದರ್ಭದಲ್ಲೇ ಬೆಂಗಳೂರಿನಲ್ಲೇ ಜೈಲುವಾಸವನ್ನು ಅನುಭವಿಸಿದ್ದರು. ಆಗಿನ ಜನಸಂಘ ಈಗಿನ ಭಾರತೀಯ ಜನತಾಪಾರ್ಟಿಯಲ್ಲಿ ಸಾಕಷ್ಟು ಸೇವೆ ಸಲ್ಲಿಸಿದ್ದ ಲಾಲಕೃಷ್ಣ ಎಲ್.ಕೆ.ಅಡ್ವಾಣಿ ಅವರು ತಮ್ಮ ರಥಯಾತ್ರೆಯ ಮೂಲಕ ದೇಶದಲ್ಲಿ ಬಿಜೆಪಿ ಕಟ್ಟಿ ಬೆಳೆಸುವಲ್ಲಿ ಪ್ರಮುಖಪಾತ್ರ ವಹಿಸಿದ್ದರು.
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗಬೇಕು ಎಂದು 1990 ರಲ್ಲಿ ದೇಶಾದ್ಯಂತ ರಥಯಾತ್ರೆಯನ್ನು ಅಡ್ವಾಣಿ ನಡೆಸಿದ್ದರು.