ಯುವಜನ

BREAKING: ಕೊಕ್ಕರ್ಣೆಯಲ್ಲಿ ಯುವತಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ಯುವಕ ಶವವಾಗಿ ಪತ್ತೆ 

Views: 824

ಕನ್ನಡ ಕರಾವಳಿ ಸುದ್ದಿ: ಬ್ರಹ್ಮಾವರ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೊಕ್ಕರ್ಣೆಯಲ್ಲಿ ಯುವತಿಯನ್ನು ಭೀಕರವಾಗಿ ಹತ್ಯೆಗೈದ ಘಟನೆ ಶುಕ್ರವಾರ ಬೆಳ್ಳಂಬೆಳಗ್ಗೆ ನಡೆದಿದೆ. ಯುವತಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾನೆ.

ಕಾರ್ತಿಕ್ ಪೂಜಾರಿ ಶವ ಬಾವಿಯಲ್ಲಿ ಪತ್ತೆಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇಂದು ಬೆಳಗ್ಗೆ ಯುವತಿ ರಕ್ಷಿತಾಳನ್ನು ಚಾಕುವಿನಿಂದ ಇರಿದಿದ್ದ. ಗಂಭೀರ ಗಾಯಗೊಂಡಿದ್ದ ಯುವತಿ ಚಿಕಿತ್ಸೆಗೆ ಸ್ಪಂದಿಸದೆ ಸಂಜೆ ವೇಳೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಇದೀಗ ಯುವಕ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಪೊಲೀಸರು ಈ ಪ್ರಕರಣವನ್ನು ವಿಚಾರಣೆ ನಡೆಸುತ್ತಿದ್ದಾರೆ.

Related Articles

Back to top button